Breaking News
Home / new delhi / 24 ಗಂಟೆಯಲ್ಲಿ 654 ಜನರು ಸಾವು ಇಂದು ವಿಶ್ವದಲ್ಲೇ ಅತಿ ಹೆಚ್ಚು.

24 ಗಂಟೆಯಲ್ಲಿ 654 ಜನರು ಸಾವು ಇಂದು ವಿಶ್ವದಲ್ಲೇ ಅತಿ ಹೆಚ್ಚು.

Spread the love

ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15 ಲಕ್ಷದ ಹತ್ತಿರ ಬಂದಿದೆ. ಸಾವಿನ ಸಂಖ್ಯೆಯೂ ವೇಗವಾಗಿ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 47,704 ಹೊಸ ಸೋಂಕು ಪ್ರಕರಣಗಳು ಕಾಣಿಸಿಕೊಂಡಿವೆ. 24 ಗಂಟೆಯಲ್ಲಿ 654 ಜನರು ಸಾವನ್ನಪ್ಪಿದ್ದಾರೆ.

 

ಈ ಸಾವುಗಳು ಇಂದು ವಿಶ್ವದಲ್ಲೇ ಅತಿ ಹೆಚ್ಚು. ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ಸಾವಿನ ಸಂಖ್ಯೆ ಭಾರತಕ್ಕಿಂತ ಕಡಿಮೆಯಿದೆ. ಯುಎಸ್ ಮತ್ತು ಬ್ರೆಜಿಲ್ ನಲ್ಲಿ ಕಳೆದ 24 ಗಂಟೆಗಳಲ್ಲಿ ಕ್ರಮವಾಗಿ 577 ಮತ್ತು 627 ಸಾವುಗಳು ಸಂಭವಿಸಿವೆ.

ಆರೋಗ್ಯ ಸಚಿವಾಲಯದ ಇತ್ತೀಚಿನ ಮಾಹಿತಿಯ ಪ್ರಕಾರ, ಭಾರತದಲ್ಲಿ ಇದುವರೆಗೆ 14,83,157 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದ್ರಲ್ಲಿ 33,425 ಜನರು ಸಾವನ್ನಪ್ಪಿದ್ದರೆ, 9,52,743 ಜನರು ಗುಣಮುಖರಾಗಿದ್ದಾರೆ.
ದೇಶದಲ್ಲಿ ಶೇಕಡಾ 33.80 ಸಕ್ರಿಯ ಪ್ರಕರಣಗಳಿವೆ. ಚಿಕಿತ್ಸೆಯ ನಂತರ ಶೇಕಡಾ 63.92ರಷ್ಟು ಮಂದಿ ಗುಣಮುಖರಾಗಿದ್ದಾರೆ. ಶೇಕಡಾ 2.28ರಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ.


Spread the love

About Laxminews 24x7

Check Also

ನಿನ್ನ ಮಗನಿಂದ ಇಂಥ ಕಪ್ಪು ಚುಕ್ಕೆ ಬಂತು; ರೇವಣ್ಣ ಮೇಲೆ ಮುಗಿಬಿದ್ದ ಎಚ್‌ಡಿಡಿ, ಎಚ್‌ಡಿಕೆ

Spread the loveಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ