ಬಾಗಲಕೋಟೆ: ಒಂದಲ್ಲ ಎರಡಲ್ಲ ಬರೊಬ್ಬರಿ 17 ಲಕ್ಷಕ್ಕೆ ಜೋಡೆತ್ತುಗಳು ಮಾರಾಟವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಇಂತಹ ದಾಖಲೆಯ ಅಪರೂಪದ ವ್ಯಾಪಾರ ನಡೆದಿದೆ.
ಗ್ರಾಮದ ಸಂಗಪ್ಪ ಮುಗಳಖೋಡ ಎಂಬುವವರ ಜೋಡೆತ್ತುಗಳು 17 ಲಕ್ಷಕ್ಕೆ ಮಾರಾಟವಾಗಿವೆ. ಮಲ್ಲಪ್ಪ ಬೋರಡ್ಡಿ ಈ ಎತ್ತುಗಳನ್ನು ಖರೀದಿಸಿದ್ದಾರೆ. ಈ ಹಿಂದೆ ಇದೇ ಮಲ್ಲಪ್ಪ ಬೋರಡ್ಡಿಯವರಿಂದ ಇದೇ ಎತ್ತುಗಳನ್ನು ಸಂಗಪ್ಪ ಎಂಟು ಲಕ್ಷಕ್ಕೆ ಖರೀದಿ ಮಾಡಿದ್ದರು. ಈ ಜೋಡೆತ್ತುಗಳು ವಿವಿಧ ಕಡೆ ತೆರೆಬಂಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಗಳನ್ನು ಗೆದ್ದಿವೆ.
ಆ ರೀತಿ ಗೆದ್ದ ಮೊತ್ತವೇ ಒಟ್ಟು ಒಂಬತ್ತು ಲಕ್ಷವಾಗಿದೆ. ಈಗ ಮತ್ತೆ ಹಳೆ ಮಾಲೀಕ ತನ್ನ ಜೋಡೆತ್ತುಗಳನ್ನು ದೊಡ್ಡ ಮೊತ್ತಕ್ಕೆ ಖರೀದಿಸಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತಕ್ಕೆ ಮಾರಾಟವಾದ ಎತ್ತುಗಳನ್ನು ನೋಡೋದಕ್ಕೆ ಜನರು ಜಮಾಯಿಸುತ್ತಿದ್ದಾರೆ. ಎತ್ತುಗಳು ಸದ್ಯ ಸೆಲೆಬ್ರಿಟಿ ವರ್ಚಸ್ಸು ಪಡೆದುಕೊಂಡಿವೆ.
Laxmi News 24×7