Breaking News

ರಾಜ್ಯದಲ್ಲಿ ಒಂದೇ ದಿನ 61 ಜನರ ಬಲಿ.

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮಂಗಳವಾರ ಒಂದೇ ದಿನ ಬರೋಬ್ಬರಿ 61 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1464ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 22 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 61 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1714 ಹೊಸ ಪ್ರಕರಣಗಳು ವರದಿಯಾಗಿದ್ದು,
ರಾಜ್ಯದಲ್ಲಿ ಒಟ್ಟು 3649 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 71,069ಕ್ಕೇರಿಕೆಯಾಗಿದೆ.

ಇನ್ನು ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ಕಳೆದ 24 ಗಂಟೆಗಳಲ್ಲಿ 1664 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಗುಲ್ಬರ್ಗಾ ವಿವಿ ಅತಿ ಹಿಂದುಳಿದ ವಿಶ್ವವಿದ್ಯಾಲಯ ಆಗಿದೆ : ಮಲ್ಲಿಕಾರ್ಜುನ್​ ಖರ್ಗೆ

Spread the loveಕಲಬುರಗಿ : ಜಿಲ್ಲೆಯಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಲಬುರಗಿ ಬೆಂಗಳೂರಿನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ