ಬೆಂಗಳೂರು: ಇಂದು 21ನೇ ಕಾರ್ಗಿಲ್ ವಿಜಯ್ ದಿವಸ್ ಆದ ಹಿನ್ನೆಲೆ, ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಿಎಎಸ್ ಯಡಿಯೂರಪ್ಪ ನಮನ ಸಲ್ಲಿಸಿದ್ರು. ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಿಎಸ್ವೈ ಭಾಗಿಯಾದ್ರು. ಇದೇ ವೇಳೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ಉಪಸ್ಥಿತರಿದ್ರು.
ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಗಿಲ್ ವಿಜಯ್ ದಿವಸ್ನಲ್ಲಿ ಹೆಮ್ಮೆಯಿಂದ ಪಾಲ್ಗೊಂಡಿದ್ದೇನೆ. ಭಾರತ ಮಾತೆಗಾಗಿ ಜೀವ ಸಮರ್ಪಿಸಿಕೊಂಡ ಯೋಧರಿಗೆ ಸದಾ ಕೃತಜ್ಞರಾಗಿದ್ದೇವೆ. ಕಾರ್ಗಿಲ್ ಅತ್ಯಂತ ದುರ್ಗಮ ಪ್ರದೇಶವಾಗಿತ್ತು.1999 ಮೇ 5ರಿಂದ ಜುಲೈ 26 ರವರಗೆ ಸೈನಿಕರು ಹೋರಾಟ ನಡೆಸಿ, ಶತ್ರುಗಳನ್ನು ಹಿಮ್ಮೆಟ್ಟಿಸಿ ವಿಜಯಿಯಾದರು.
ಇಡೀ ದೇಶವನ್ನು ರಕ್ಷಣೆ ಮಾಡಿದ ಯೋಧರ ಸಾಹಸಗಾತೆ ಯುವ ಪೀಳಿಗೆಗೆ ಎಂದಿಗೂ ಸ್ಫೂರ್ತಿ ಎಂದರು
ಪ್ರವಾಹ, ಭೂಕಂಪ, ಸುನಾಮಿಯಂಥ ವಿಪತ್ತಿನಲ್ಲಿ ನಾಡಿನ ರಕ್ಷಣೆಗೆ ಧಾವಿಸುವ ಯೋಧರ ಸಾಹಸ ಅನುಕರಣೀಯ. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ಕುಟುಂಬದೊಂದಿಗೆ ನಾವಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ರು.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??