Breaking News

ಹೋಟೆಲ್​​ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಮೂವರು ಅರೆಸ್ಟ್​

Spread the love

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಗೌರವ್, ಹೀನಾ ಹಾಗೂ ಅಣ್ಣಪ್ಪ ಬಂಧಿತರು.

ಆರೋಪಿಗಳು ಲಾಡ್ಜ್ ನಡೆಸಲು ಪರವಾನಗಿ ಪಡೆದು ಅನಧಿಕೃತವಾಗಿ ವೇಶ್ಯಾವಾಟಿಕೆಗೆ ಇಳಿದಿದ್ದರು. ಕೆಲಸದ ಆಮಿಷವೊಡ್ಡಿ ಹೊರರಾಜ್ಯದಿಂದ ಹುಡುಗಿಯರನ್ನು ಕರೆಯಿಸಿ ಕಂಫರ್ಟ್ ಹೋಟೆಲ್​​​ನಲ್ಲಿ ದಂಧೆ ನಡೆಸುತ್ತಿದ್ದರು. ಆನ್​ಲೈನ್​​ನಲ್ಲಿ ಮೊಬೈಲ್ ನಂಬರ್ ಹಾಕಿಕೊಂಡು, ಟೆಲಿಕಾಲರ್ ಮೂಲಕ ಗಿರಾಕಿಗಳನ್ನ ಕರೆಸುತ್ತಿದ್ದರು. ಇದು ಯಾರಿಗೂ ಗೊತ್ತಾಗದಂತೆ ಒಂದೊಂದು ನಂಬರ್ ಯ್ಯೂಸ್ ಮಾಡುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಅಧಿಕಾರಿಗಳು, ಆರೋಪಿಗಳನ್ನ ಅರೆಸ್ಟ್​ ಮಾಡಿದ್ದಾರೆ. ಬಂಧಿತರಿಂದ 6 ಮೊಬೈಲ್ ಫೋನ್​ಗಳು, 500 ರೂಪಾಯಿ ಮುಖಬೆಲೆಯ 3 ನೋಟುಗಳು ಸೇರಿ ₹1500 ನಗದು ಹಾಗೂ ಕಾಂಡೋಮ್​ಗಳನ್ನ ವಶಪಡಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ

Spread the love ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ ಎಂಎಲ್ಸಿ ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ