Breaking News
Home / new delhi / ಸದ್ಯ 3456 ಸೋಂಕಿತರು…..

ಸದ್ಯ 3456 ಸೋಂಕಿತರು…..

Spread the love

ಬೆಳಗಾವಿ: ಕೋವಿಡ್ ಮಹಾಮಾರಿ ದಿನದಿಂದ ದಿನಕ್ಕೂ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ ಮತ್ತೆ ದ್ವಿಶತಕ ದಾಟಿದೆ. 219 ಸೋಂಕು ಪ್ರಕರಣ ದೃಢಪಟ್ಟಿವೆ. ಒಟ್ಟಾರೆ 3456 ಸೋಂಕಿತರು ಇದ್ದು, ಜತೆಗೆ ನಾಲ್ವರು ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್ ಸೋಂಕಿತರ ಏರಿಕೆ ಪ್ರಮಾಣ ಹೆಚ್ಚುತ್ತಲೇ ಹೊರಟಿದ್ದು, ಕಳೆದ ಒಂದು ವಾರದಿಂದ ದಿನನಿತ್ಯ 200ರ ಗಡಿ ದಾಟುತ್ತಲೇ ಸಾಗಿದೆ. ಸಾವಿನ ಸಂಖ್ಯೆಯೂ ಇಳಿಕೆ ಆಗಿಲ್ಲ. ಹೆಚ್ಚಿನ ಸೋಂಕಿತರು ಹಳ್ಳಿಗಳಲ್ಲಿ ಪತ್ತೆಯಾಗುತ್ತಿದ್ದಾರೆ. ರಾಯಬಾಗದ 60 ವರ್ಷದ ವ್ಯಕ್ತಿ, ಬೆಳಗಾವಿಯ 50 ವರ್ಷದ ವ್ಯಕ್ತಿ, ರಾಮದುರ್ಗದ 51 ವರ್ಷದ ವ್ಯಕ್ತಿ ಹಾಗೂ 60 ವರ್ಷದ ವ್ಯಕ್ತಿ ಕೋವಿಡ್ ಗೆ ಬಲಿಯಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 74ಕ್ಕೆ ಏರಿಕೆ ಆಗಿದೆ.

219 ಹೊಸ ಪ್ರಕರಣಗಳಿಂದ 3456 ಸೋಂಕಿತರು ಆಗಿದ್ದು, ಶನಿವಾರ ಒಂದೇ ದಿನ 51 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿ ಇಲ್ಲಿಯವರೆಗೆ 995 ಜನ ಬಿಡುಗಡೆ ಆದಂತಾಗಿದೆ.

ಇನ್ನೂ 420 ಜನರ ವರದಿ ಬರುವುದು ಬಾಕಿ ಇದೆ. ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್‌ -19 ವಾರ್ಡ್‌ನಲ್ಲಿ ಸದ್ಯ 2387 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 43166 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 7747 ಜನರು 14 ದಿನಗಳ ಕಾಲ ಗೃಹ ನಿಗಾದಲ್ಲಿದ್ದರೆ, ಒಟ್ಟು 7754 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ, 25278 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ.

ಇಂದಿನವರೆಗೆ 41195 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 37228 ವರದಿ ನಕಾರಾತ್ಮಕವಾಗಿದೆ. 420 ಜನರ ವರದಿಗಾಗಿ ಕಾಯಲಾಗುತ್ತಿದೆ. ಸೋಂಕಿನಿಂದ ಒಟ್ಟು 74 ಜನ ಬಲಿಯಾದಂತಾಗಿದೆ ಎಂದು ಜಿಲ್ಲಾ ವೈದ್ಯಕೀಯ ವರದಿ ತಿಳಿಸಿದೆ.


Spread the love

About Laxminews 24x7

Check Also

ಬಸ್​​​ ನಿಲ್ಲಿಸಿಲ್ಲವೆಂದು ಚಾಲಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

Spread the loveಬೆಳಗಾವಿ, ಏ.25: ಬಸ್ ನಿಲ್ಲಿಸಿಲ್ಲ ಎಂದು ಸರ್ಕಾರಿ ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಮುಸ್ಲಿಂ ಯುವಕರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ