ಬೆಳಗಾವಿ: ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದ ಯುವಕನಿಗೆ ಮಾಲೆ ಹಾಕಿ, ಪಟಾಕಿ ಸಿಡಿಸಿ ಇಲ್ಲಿಯ ಖಡಕ್ ಗಲ್ಲಿಯಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು.
ಆಸ್ಪತ್ರೆಯಿಂದ ಬಿಡುಗಡೆ ಆಗಿ ಬರುತ್ತಿದ್ದಂತೆ ಖಡಕ್ ಗಲ್ಲಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ಆಸ್ಪತ್ರೆಯಿಂದ ಬಿಡುಗಡೆಯಾಗಿ ಬರುತ್ತಿದ್ದಂತೆ ಪಟಾಕಿ ಸಿಡಿಸಿದ ಸ್ಥಳೀಯ ಯುವಕರು ಸಂಭ್ರಮಿಸಿದರು.
ಹತ್ತು ದಿನಗಳ ಹಿಂದೆ ಖಡಕ್ ಗಲ್ಲಿಯ 35 ವರ್ಷ ವಯಸ್ಸಿನ ಈ ವ್ಯಕ್ತಿಗೆ ಕೋವಿಡ್-19 ಸೋಂಕು ವಕ್ಕರಿಸಿತ್ತು. ಇಲ್ಲಿನ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತ ನಿನ್ನೆ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಖಡಕ್ ಗಲ್ಲಿಯಲ್ಲಿ ಹಾಕಿದ್ದ ಬ್ಯಾರಿಕೇಡ್ ಗೆ ರಿಬ್ಬನ್ ಕತ್ತರಿಸಿ ಒಳಗೆ ಪ್ರವೇಶ ನೀಡಲಾಯಿತು. ಬಿಡುಗಡೆಯಾದ ಹಿನ್ನೆಲೆಯಲ್ಲಿ ಯುವಕನಿಗೆ ಮಾಲೆ ಹಾಕಿ ಪಟಾಕಿ ಸಿಡಿಸಿ ಸಂಭ್ರಮದಿಂದ ಸ್ವಾಗತಿಸಲಾಯಿತು. ಮನೆಗೆ ಯುವಕ ಆಗಮಿಸುತ್ತಿದ್ದಂತೆ ಕುಟುಂಬಸ್ಥರು ಆರತಿ ಬೆಳಗಿ, ದೃಷ್ಟಿ ತೆಗೆದು ಸ್ವಾಗತ ಮಾಡಿಕೊಂಡರು