ಹವಾಮಾನ ಇಲಾಖೆ ರಾಜ್ಯದ ಜನತೆಗೆ ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜುಲೈ 4 ರಿಂದ 7 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಇನ್ನೂ, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಉತ್ತರ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ದಾರವಾಡ, ಬೀದರ್, ಬೆಳಗಾವಿ, ರಾಯಚೂರು, ಯಾದಿಗರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.