ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಬಿರುಸು ಪಡೆದುಕೊಂಡಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಹಾಸನ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನದಿಗಳ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮತ್ತೆ ಮಣ್ಣು ಕುಸಿತದ ಪ್ರಕರಣಗಳು ವರದಿಯಾಗುತ್ತಿವೆ. ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿ ಸೇತುವೆ ಕುಸಿಯುವ ಹಂತ ತಲುಪಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇತ್ತ ಜಿಲ್ಲೆಯ ಪ್ರಮುಖ ಸೇತುವೆ ಹೆಬ್ಬಾಳ್ ಬ್ರಿಡ್ಜ್ ಮುಳುಗಡೆಯಾಗಿದೆ. ಜಿಲ್ಲೆಯ ಕೊಪ್ಪ, ಶೃಂಗೇರಿ, ಕಳಸ, ಬಾಳೆಹೊನ್ನೂರು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ.
ಇತ್ತ ಕೊಡಗು ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ತ್ರೀವೇಣಿ ಸಂಗಮ ಜಲಾವೃತವಾಗಿದೆ.