Breaking News
Home / new delhi / ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ : ಕೆಲವೆಡೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ : ಕೆಲವೆಡೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

Spread the love

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಬಿರುಸು ಪಡೆದುಕೊಂಡಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಹಾಸನ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನದಿಗಳ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮತ್ತೆ ಮಣ್ಣು ಕುಸಿತದ ಪ್ರಕರಣಗಳು ವರದಿಯಾಗುತ್ತಿವೆ. ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿ ಸೇತುವೆ ಕುಸಿಯುವ ಹಂತ ತಲುಪಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇತ್ತ ಜಿಲ್ಲೆಯ ಪ್ರಮುಖ ಸೇತುವೆ ಹೆಬ್ಬಾಳ್‍ ಬ್ರಿಡ್ಜ್‍  ಮುಳುಗಡೆಯಾಗಿದೆ. ಜಿಲ್ಲೆಯ ಕೊಪ್ಪ, ಶೃಂಗೇರಿ, ಕಳಸ, ಬಾಳೆಹೊನ್ನೂರು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ.

ಇತ್ತ ಕೊಡಗು ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ತ್ರೀವೇಣಿ ಸಂಗಮ ಜಲಾವೃತವಾಗಿದೆ.


Spread the love

About Laxminews 24x7

Check Also

ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ

Spread the loveನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ ಹುಬ್ಬಳ್ಳಿ,ಏ.19- ಹಾಡಹಗಲೇ ಕಾಲೇಜು ಕ್ಯಾಂಪಸ್‍ನಲ್ಲಿ ಯುವತಿಯ ಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ