Breaking News

ಹುಬ್ಬಳ್ಳಿಯ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ ಲಿಂಗೈಕ್ಯ

Spread the love

ಬೆಳಗಾವಿ: ವಿಜಯಪುರ‌ದ ಷಣ್ಮುಖಾರೂಢ ಮಠ ಹಾಗೂ ಹುಬ್ಬಳ್ಳಿಯ ಶಾಂತಾಶ್ರಮದ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ (64) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ.

ನಗರದ ಕೆ‌ಎಲ್‌ಇ ಆಸ್ಪತ್ರೆಗೆ ಸಂಜೆ ದಾಖಲಾಗಿದ್ದ ಶ್ರೀಗಳು ಚಿಕಿತ್ಸೆ ಫಲಿಸದೇ ಲಿಂಗೈಕ್ಯರಾದರು. ಕಳೆದ ಎರಡು ದಿನಗಳಿಂದ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಹೆಚ್ಚಿನ ಚಿಕಿತ್ಸೆಗೆ ಶುಕ್ರವಾರ ಸಂಜೆ ಕೆ.ಎಲ್.ಇ ಆಸ್ಪತ್ರೆಗೆ ಕರೆತರಲಾಗಿದ್ದು, ಫಲಕಾರಿಯಾಗದೇ ಲಿಂಗೈಕ್ಯರಾದರು ಎಂದು ಶ್ರೀಮಠದ ಉತ್ತರಾಧಿಕಾರಿ ಅಭಿನವ ಸಿದ್ಧಾರೂಢ ಸ್ವಾಮೀಜಿ ತಿಳಿಸಿದ್ದಾರೆ.

ಆ. 8ರಂದು ಹುಬ್ಬಳ್ಳಿಯಲ್ಲಿ ಅಂತ್ಯಕ್ರಿಯೆ: ಅಭಿನವ ಶಿವಪುತ್ರ ಮಹಾಸ್ವಾಮಿಗಳ ಸಮಾಧಿ ಕ್ರಿಯೆ ಆ.8ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯ ಸಿದ್ಧಾರೂಢ ಮಠದ ಬಳಿಯ ಶಾಂತಾಶ್ರಮದ ಆವರಣದಲ್ಲಿ ಪೂಜ್ಯರ ಸಮಾಧಿಕ್ರಿಯೆ ನೆರೆವೇರಲಿದೆ.

ಸಂತಾಪ: ಶ್ರೀಗಳ ನಿಧನಕ್ಕೆ ಶಿವಾನಂದ ಭಾರತಿ ಸ್ವಾಮಿಗಳು ಸಾಧು ಸಂಸ್ಥಾನಮಠ ಇಂಚಲ, ಶಿವಕುಮಾರ ಸ್ವಾಮಿಗಳು ಬೀದರ್, ಗದುಗಿನ ಡಂಬಳ ಜಗದ್ಗುರು ತೋಂಟದ ಸಿದ್ಧರಾಮ ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಅಲ್ಲಮಪ್ರಭು ಸ್ವಾಮೀಜಿ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತಿತರರ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಗುಲ್ಬರ್ಗಾ ವಿವಿ ಅತಿ ಹಿಂದುಳಿದ ವಿಶ್ವವಿದ್ಯಾಲಯ ಆಗಿದೆ : ಮಲ್ಲಿಕಾರ್ಜುನ್​ ಖರ್ಗೆ

Spread the loveಕಲಬುರಗಿ : ಜಿಲ್ಲೆಯಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಲಬುರಗಿ ಬೆಂಗಳೂರಿನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ