ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ.
ಮುಖ್ಯವಾಗಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನದಿಗಳ ಪ್ರಕೋಪ ಹೆಚ್ಚಿದ್ದು ಅನೇಕ ಸಣ್ಣ ಸೇತುವೆಗಳು ಮುಳುಗಡೆಯಾಗಿದೆ. ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ.
ಇದೇ ವೇಳೆ ಕಾವೇರಿ ಅಣೆಕಟ್ಟೆಗಳಿಂದ ಹೆಚ್ಚುವರಿ ನೀರು ಹರಿದ ಪರಿಣಾಮ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಸುಪ್ರಸಿದ್ಧ ರಂಗನತಿಟ್ಟು ಪಕ್ಷಧಾಮಕ್ಕೆ ಸಹಾ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
ಇದೇ ವೇಳೆ ಕಳೆದ ಬಾರಿಗಿಂತ ಈ ಬಾರಿ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ನೆರೆಯ ಮಹಾರಾಷ್ಟ್ರವು ಕೋಯ್ನಾ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿಲ್ಲ. ಇದರಿಂದ ನದಿತೀರದ ಜನರು ಹೇದರುವ ಅವಶ್ಯಕತೆಯಿಲ್ಲ. ಪ್ರವಾಹ ನಿಯಂತ್ರಣಕ್ಕೆ ಸರ್ಕಾರ ಬದ್ದವಾಗಿದ್ದು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.
ಇನ್ನು ಕಳೆದ ವರ್ಷ ಪ್ರವಾಹದಲ್ಲಿ ಹಾನಿಗೊಳಗಾದ ಮನೆಗಳಿಗೆ ಪರಿಹಾರದ ಹಣ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದೆ. ಶೀಘ್ರವೇ ಆ ಸಮಸ್ಯೆಗಳನ್ನು ಪರಿಹರಿಸಿ ಪರಿಹಾರದ ಹಣವನ್ನು ಒದಗಿಸಲಾಗುವುದು ಎಂದು ರಮೇಶ್ ಜಾರಕಿಹೋಳಿ ಭರವಸೆ ನೀಡಿದರು.
ಚಿಕ್ಕೋಡಿ ತಾಲೂಕಿನ ಅಂಕಲಿ, ಮಾಂಜರಿ, ಯಡೂರ ಗ್ರಾಮದ ಕೃಷ್ಣಾನದಿ ತೀರದ ಗ್ರಾಮಗಳಿಗೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿಯವರು ನೆರೆ ಪರಿಸ್ಥಿತಿಯನ್ನು ಅವಲೋಕಿಸಿದರು.
ಯಡೂರ ಗ್ರಾಮದ ನದಿತೀರದಲ್ಲಿ ಲೈಫ್ ಜಾಕೆಟ್ ಧರಿಸಿ ಬೋಟ್ ಮೂಲಕ ಪ್ರವಾಹ ಪರಿಸ್ಥಿತಿಯನ್ನು ಖುದ್ದು ಪರೀಶೀಲಿಸಿ ಜನ ಪ್ರವಾಹಕ್ಕೆ ಅಂಜುವುದು ಬೇಡ ಎಂದರು. ಜನರ ರಕ್ಷಣೆಗೆ ಎಲ್ಲ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.