Breaking News

ಕೋವಿಡ್‌: ಸೋಂಕಿತರಿಗಿಂತ ಗುಣಮುಖರಾದವರ ಹೆಚ್ಚಳ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 312 ಜನರಿಗೆ ಕೋವಿಡ್‌-19 ದೃಢಪಟ್ಟಿದೆ. ಇದೇ ವೇಳೆ, 378 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಏರಿಕೆಯಾಗಿದೆ.

ಇದುವರೆಗೆ ಸೋಂಕು ತಗುಲಿದವರ ಸಂಖ್ಯೆ 5,174ಕ್ಕೆ ತಲುಪಿದೆ. ಇವರಲ್ಲಿ 3,431 ಸಕ್ರಿಯ ಪ್ರಕರಣಗಳಿವೆ. ಬೆಳಗಾವಿ, ಗೋಕಾಕ, ಖಾನಾಪುರ, ಸವದತ್ತಿ, ಚಿಕ್ಕೋಡಿ, ರಾಮದುರ್ಗ, ಹುಕ್ಕೇರಿ, ರಾಯಬಾಗ ಸೇರಿದಂತೆ ಬಹುತೇಕ ಜಿಲ್ಲೆಯ ಎಲ್ಲ ಭಾಗಗಳಲ್ಲೂ ಸೋಂಕು ಕಂಡುಬಂದಿದೆ. ಬೆಳಗಾವಿಯ 60 ವರ್ಷದ ವೃದ್ಧೆಯೊಬ್ಬರು (ಪಿ- 157344) ಮೃತರಾಗಿದ್ದು, ಸೋಂಕಿನಿಂದ ಮೃತರಾದವರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ.

378 ಜನರು ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಇದುವರೆಗೆ ಗುಣಮುಖರಾದವರ ಸಂಖ್ಯೆ 1,649ಕ್ಕೆ ತಲುಪಿದೆ.

328 ಜನರ ಮಾದರಿಯ ಫಲಿತಾಂಶ ಇನ್ನೂ ಬರಬೇಕಾಗಿದೆ.

σ*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಮಂಡ್ಯದಲ್ಲಿ ಮೂರು ದಿನಗಳವರೆಗೆ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಕ್ತಾಯ

Spread the loveಮಂಡ್ಯ : ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ