ಬೆಂಗಳೂರು : ಹವಾಮಾನ ಇಲಾಖೆಯು ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಇಂದಿನಿಂದ ಜುಲೈ 10 ರವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಇಂದಿನಿಂದ ರಾಜ್ಯದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈಗಾಗಲೇ ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ಭಾನುವಾರ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ.