ಬೆಂಗಳೂರು, ಮಾ.1- ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ.ಈ ತಿಂಗಳ ಅಂತ್ಯದವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಒಂದು ವೇಳೆ ಕೃಷ್ಣಾರೆಡ್ಡಿ ಅವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದರೆ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ.
ಹಾಗೊಂದು ವೇಳೆ ಅಧಿಕಾರದಲ್ಲಿ ಇನ್ನೂ ಕೆಲವು ದಿನಗಳ ಮಟ್ಟಿಗೆ ಮುಂದುವರೆಯುತ್ತೇನೆಂದು ಕೃಷ್ಣಾರೆಡ್ಡಿ ಪಟ್ಟು ಹಿಡಿದರೆ ಅವರ ವಿರುದ್ಧ ಈ ಅಧಿವೇಶನದಲ್ಲೇ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಸಜ್ಜಾಗಿದೆ.ಈ ಹಿಂದೆಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಅವರಿಗೆ ಮೌಖಿಕವಾಗಿ ಮನವಿ ಮಾಡಿದ್ದರು ಎನ್ನಲಾಗುತ್ತಿದೆ