Breaking News
Home / ಜಿಲ್ಲೆ / ಏ.20ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಬಜೆಟ್ ಮಂಡನೆ

ಏ.20ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಬಜೆಟ್ ಮಂಡನೆ

Spread the love

ಬೆಂಗಳೂರು, ಏ.15- ಲಾಕ್‍ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಬಿಬಿಎಂಪಿ ಬಜೆಟ್ ಏ.20ರಂದು ಮಂಡನೆಯಾಗಲಿದೆ. ಹನ್ನೊಂದು ಸಾವಿರ ಕೋಟಿ ರೂ.ಗಳ ಅಂದಾಜು ಮೊತ್ತದ ಬಿಬಿಎಂಪಿ ಬಜೆಟನ್ನು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಶ್ರೀನಿವಾಸ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಡನೆ ಮಾಡಲಿದ್ದಾರೆ.

ಈ ಬಾರಿಯ ಬಜೆಟ್‍ನಲ್ಲಿ ಯಾವುದೇ ಹೊಸ ಕಾಮಗಾರಿಗಳಿಗೆ ಅನುಮೋದನೆ ನೀಡುವುದಿಲ್ಲ. ಬದಲಿಗೆ ಜನರಿಗೆ ಸಹಕಾರಿಯಾಗುವಂತಹ ಹಲವಾರು ಯೋಜನೆಗಳನ್ನು ಮಂಡಿಸುವ ಸಾಧ್ಯತೆಗಳಿವೆ.ರಾಜ್ಯ ಸರ್ಕಾರದ ಬಜೆಟ್ ಮಂಡನೆ ಮಾಡಿದ ಕೆಲವು ದಿನಗಳಲ್ಲೇ ಬಿಬಿಎಂಪಿ ಬಜೆಟ್ ಮಂಡನೆ ಮಾಡಬೇಕಿತ್ತು. ಆದರೆ, ಬಜೆಟ್ ಮುನ್ನವೇ ಕೊರೊನಾ ಮಹಾಮಾರಿ ನಗರಕ್ಕೂ ಕಾಲಿಟ್ಟ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಬಜೆಟ್ ಮಂಡನೆಯನ್ನು ಮುಂದೂಡಲಾಗಿತ್ತು.

ಸಾಮಾಜಿಕ ಅಂತರ ಕಾಯ್ದುಕೊಂಡು ಜನ ಗುಂಪು ಗೂಡದಂತೆ ಬಜೆಟ್ ಮಂಡನೆ ಮಾಡುವುದು ಅಸಾಧ್ಯವಾಗಿತ್ತು. ಇದರ ಜತೆಗೆ ನಗರದಲ್ಲಿ 144 ಸೆಕ್ಷನ್ ಜಾರಿ ಇದ್ದ ಹಿನ್ನೆಲೆಯಲ್ಲಿ ಬಜೆಟನ್ನು ಮುಂದೂಡುತ್ತಲೇ ಬರಲಾಗುತ್ತಿತ್ತು.

ಬಿಬಿಎಂಪಿ ಸಿಬ್ಬಂದಿಗಳಿಗೆ ವೇತನ ಸೇರಿದಂತೆ ಆಡಳಿತಾತ್ಮಕ ನಿರ್ಧಾರಕ್ಕೆ ಹಣ ಬಳಕೆ ಮಾಡಿಕೊಳ್ಳಲು ಅಸಾಧ್ಯವಾದ ಹಿನ್ನೆಲೆಯಲ್ಲಿ ಮೇಯರ್ ಗೌತಮ್‍ಕುಮಾರ್ ಅವರು ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆಗೆ ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿದ್ದರು.

ಮೇಯರ್ ಅವರ ಮನವಿಗೆ ಸ್ಪಂದಿಸಿರುವ ಸರ್ಕಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆ ಮಾಡಿ ಸರ್ಕಾರಕ್ಕೆ ರವಾನಿಸುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿರುವ ತೆರಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಶ್ರೀನಿವಾಸ್ ಅವರು ಸೋಮವಾರ ಬಜೆಟ್ ಮಂಡನೆ ಮಾಡಲಿದ್ದಾರೆ.


Spread the love

About Laxminews 24x7

Check Also

ಸುವರ್ಣಸೌಧದಲ್ಲಿ‌ ಸ್ಪೀಕರ್, ಸಭಾಪತಿಗಳು ಹಸಿರೀಕರಣಕ್ಕೆ ಪಣ ತೊಟ್ಟಿದ್ದಾರೆ

Spread the loveಬೆಳಗಾವಿ: ಸುವರ್ಣಸೌಧದಲ್ಲಿ ಪರಿಸರ ಕಾಳಜಿ ಮೆರೆಯುವ ನಿಟ್ಟಿನಲ್ಲಿ ಸ್ಪೀಕರ್ ಯು ಟಿ ಖಾದರ್ ಚಳಿಗಾಲದ‌ ಅಧಿವೇಶನದಲ್ಲಿ ವಿನೂತನ ಪ್ರಯೋಗವೊಂದನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ