Breaking News

ಮುಷ್ಕರ ಹಿಂಪಡೆಯದಿದ್ದರೆ ಸರಕಾರಿ ದರದಲ್ಲಿಖಾಸಗಿ ಬಸ್ಸು ಪ್ರಾರಂಭ : ಲಕ್ಷ್ಮಣ ಸವದಿ

Spread the love

ಬೆಂಗಳೂರು : ಮುಷ್ಕರ ನಿರತ ಸಾರಿಗೆ ಸಿಬ್ಬಂದಿ ಮಿತ್ರರು ಮಾತುಕತೆಗೆ ಮುಕ್ತ ಆಹ್ವಾನ ನೀಡಿದ್ದರು ಸಹ ಮಾತುಕತೆಗೆ ಬಾರದೇ ಇದ್ದರೆ ರಾಜ್ಯದಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ಖಾಸಗಿ ಬಸ್ಸುಗಳನ್ನು ಸರ್ಕಾರಿ ಬಸ್ ದರದಲ್ಲಿ ಓಡಿಸುವ ವ್ಯವಸ್ಥೆ ಆರಂಭಿಸಲಾಗುತ್ತದೆ.
ಎಂದು ಚರ್ಚೆ ನಡೆಸಿ ಆರಂಭಿಸಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆಗಳ ಸುಮಾರು 1.30 ಲಕ್ಷ ನೌಕರರ ಹಿತಾಸಕ್ತಿ ರಕ್ಷಿಸಲು ನಮ್ಮ ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಸಾರಿಗೆ ಸಿಬ್ಬಂದಿಗಳ ಬಗ್ಗೆ ನನಗೆ ಮತ್ತು ನಮ್ಮ ಸರ್ಕಾರಕ್ಕೆ ಯಾವತ್ತೂ ಸಹಾನುಭೂತಿ ಇದೆ.ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದರೂ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿಯೂ ಸಹ ಎಲ್ಲಾ ಸಿಬ್ಬಂದಿಗಳಿಗೆ ಯಾವುದೇ ಕಡಿತವಿಲ್ಲದೇ ಸಂಬಳ ನೀಡಿದ್ದು ಇದಕ್ಕೆ ನಿದರ್ಶನವಾಗಿದೆ ಎಂದಿದ್ದಾರೆ.

ಸರಕಾರಿ ನೌಕರರನ್ನಾಗಿ ಮಾಡುವುದನ್ನು ಹೊರತು ಪಡಿಸಿ ಸಿಬ್ಬಂದಿಗಳ ಉಳಿದ ಬೇಡಿಕೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಹಿಡಿಯಲು ನಮ್ಮ ಸರ್ಕಾರ ಅವರೊಂದಿಗೆ ಮಾತುಕತೆ ನಡೆಸಲು ಸದಾ ಸಿದ್ಧವಿದೆ. ಆದ್ದರಿಂದ ಕೋಟ್ಯಂತರ ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣ ಈ ಮುಷ್ಕರವನ್ನು ಕೈಬಿಟ್ಟು ತಮ್ಮ ಕರ್ತವ್ಯಕ್ಕೆ ವಾಪಸಾಗಬೇಕೆಂದು ನಾನು ನಮ್ಮ ಸಾರಿಗೆ ಸಂಸ್ಥೆಗಳ ಎಲ್ಲಾ ನೌಕರ ಬಾಂಧವರಲ್ಲಿ ಮತ್ತೊಮ್ಮೆ ಕಳಕಳಿಯಿಂದ ಮನವಿ ಮಾಡಿಕೊಳ್ಳುತ್ತೇನೆ ಎಂದರು.

ಸಾರಿಗೆ ಸಿಬ್ಬಂದಿಗಳೆಂದರೆ ನನಗೆ ನನ್ನ ಕುಟುಂಬವಿದ್ದಂತೆ, ಅವರ ಸಂಕಷ್ಟಗಳಿಗೆ ಸ್ಪಂದಿಸಲು ನಾನು ಸದಾ ಸಿದ್ಧ. ಹಿಂದೆಯೂ ಅನೇಕ ಸಂದರ್ಭಗಳಲ್ಲಿ ಇದನ್ನು ಸಾರಿಗೆ ಸಿಬ್ಬಂದಿಗಳು ಮನಗಂಡಿದ್ದಾರೆ. ಅಷ್ಟೇ ಅಲ್ಲ ಮುಂದೆಯೂ ನಮ್ಮ ಸಾರಿಗೆ ಸಿಬ್ಬಂದಿಗಳು ತಮ್ಮ ಬೇಡಿಕೆಗಳನ್ನು ತಿಳಿಸಬೇಕೆಂದರೆ ನನ್ನ ಬಳಿ ಬರುವುದಕ್ಕೆ ಸದಾ ಮುಕ್ತ ಅವಕಾಶವಿದೆ. ಈ ಬಗ್ಗೆ ಯಾವುದೇ ಆತಂಕ ಬೇಡ. ನಮ್ಮ ಸಾರಿಗೆ ಒಕ್ಕೂಟಗಳು ಮತ್ತು ಸಿಬ್ಬಂದಿಗಳು ನನ್ನನ್ನು ಭೇಟಿ ಮಾಡಿ ತಮ್ಮ ಕಷ್ಟಸುಖಗಳನ್ನು ಹೇಳಿಕೊಳ್ಳಬಹುದೆಂದರು.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ