ಬೆಂಗಳೂರು: ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಿದರು.
ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಈಶ್ವರ ಖಂಡ್ರೆ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ ಹಾಜರಿದ್ದರು.
ಕೇಂದ್ರ ಸಚಿವರಾಗಿದ್ದ ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಚುನಾವಣೆ ದಿನಾಂಕ ನಿಗದಿಯಾಗಿಲ್ಲವಾದರೂ ಪಕ್ಷಗಳು ತಯಾರಿಯಲ್ಲಿ ತೊಡಗಿದೆ.
Laxmi News 24×7