ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಸಕ್ರಿಯ ರಾಜಕಾರಣದಿಂದ ಹೊರ ಬರುತ್ತೇನೆ ಎನ್ನುವ ಮೂಲಕ ಮಾಜಿ ಸ್ಪೀಕರ್ ರಮೇಶ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಸೇರಿದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ.
ಅಧಿಕಾರದ ದುರಾಸೆಯಾಗಿ ಅನೈತಿಕ ರಾಜಕೀಯ ಮಾಡುತ್ತಿದ್ದಾರೆ. ರಾಜ್ಯದ ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದೆ ಎಂದು ಅಸಮಧಾನ ಹೊರ ಹಾಕಿದರು.
ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ. ಯಾರಿಂದಲೂ ಹಣ ತಗೆದುಕೊಂಡಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ರಾಜಕೀಯದಿಂದ ನಿವೃತ್ತನಾಗಲಿದ್ದೇನೆ ಎಂದು ಹೇಳಿದರು.
Laxmi News 24×7