Breaking News

ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು : ಕುತೂಹಲ ಮೂಡಿಸಿರುವ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ.

ಬೆಳಗಾವಿ ಭಾಗದಲ್ಲಿ ಸತೀಶ್ ಜಾರಕಿಹೊಳಿ ಅವರು ಸಾಕಷ್ಟು ಪ್ರಭಾವ ಹೊಂದಿದ್ದು, ಹೀಗಾಗಿ ಸತೀಶ್ ಜಾರಿಕಿಹೊಳಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಸೋಮವಾರ ವಿಧಾನಸೌಧದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ಕಾಂಗ್ರೆಸ್ ನಾಯಕರು ನಡೆಸಿದ ಸಭೆಯಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ. ಮತ್ತೊಂದಡೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಮತ್ತಷ್ಟು ಹಲವು ನಾಯಕರ ಹೆಸರುಗಳು ಕೂಡ ಸಭೆಯಲ್ಲಿ ಪ್ರಸ್ತಾಪವಾಗಿವೆ ಎನ್ನಲಾಗಿದೆ.


Spread the love

About Laxminews 24x7

Check Also

ಸಿಲಿಂಡರ್ ಬೆಲೆ ಏರಿಕೆ: ಲಕ್ಷ್ಮೀ ಹೆಬ್ಬಾಳಕರ್ ಕಿಡಿ

Spread the loveಬೆಳಗಾವಿ: ‘ಮಹಿಳಾ ದಿನಾಚರಣೆಯ ದಿನವೇ ದೇಶದ ಮಹಿಳೆಯರಿಗೆ ಕೇಂದ್ರದ ಬಿಜೆಪಿ ಸರ್ಕಾರ ಅಡುಗೆ ಅನಿಲದ ಬೆಲೆ ಏರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ