Breaking News
Home / new delhi / ದ್ರೋಣ ಪ್ರತಾಪ್ ಈಗ ಪೊಲೀಸ್ ರ ವಶಕ್ಕೆ

ದ್ರೋಣ ಪ್ರತಾಪ್ ಈಗ ಪೊಲೀಸ್ ರ ವಶಕ್ಕೆ

Spread the love

ಬೆಂಗಳೂರು: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್‍ನನ್ನು ಬಿಬಿಎಂಪಿ ಅಧಿಕಾರಿಗಳು ಮತ್ತು ತಲಘಟ್ಟಪುರ ಪೊಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.

ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಡ್ರೋನ್ ಪ್ರತಾಪ್ ತಲೆಮರೆಸಿಕೊಂಡಿದ್ದ. ಅಧಿಕಾರಿಗಳು ಅವನ ಹುಡುಕಾಟದಲ್ಲಿ ತೊಡಗಿದ್ದರು. ಇದೀಗ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರತಾಪ್‍ನನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಕೆಂಗೇರಿ ಬಳಿಯ ಖಾಸಗಿ ಹೋಟೆಲ್‍ನಲ್ಲಿ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ವಶಕ್ಕೂ ಮುನ್ನ ಮೈಸೂರಿನಲ್ಲಿ ಕ್ವಾರಂಟೈನ್ ಆಗುತ್ತೇನೆ ಎಂದು ಪ್ರತಾಪ್ ಪಟ್ಟು ಹಿಡಿದಿದ್ದ.ಆದರೆ ಬೆಂಗಳೂರಿನಲ್ಲೇ ಕ್ವಾರಂಟೈನ್ ಆಗುವಂತೆ ಸೂಚನೆ ನೀಡಿ ಅಧಿಕಾರಿಗಳು ಕರೆತಂದಿದ್ದಾರೆ.

ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಕ್ಕೆ ಎಫ್‍ಐಆರ್ ದಾಖಲಾಗುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪ್ರತಾಪ್ ನಾಪತ್ತೆಯಾಗಿದ್ದ. ಕೆಲ ದಿನಗಳ ಹಿಂದಷ್ಟೇ ಹೊರ ಜಿಲ್ಲೆಗೆ ಹೋಗಿದ್ದ ಪ್ರತಾಪ್, ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ. ಅಲ್ಲದೆ ಆತ ವಾಸವಿದ್ದ ಅಂಜನಾಪುರದ ಎಸ್‍ಎಸ್‍ಎಂಐಎಂಜಿ ವಿಂಡ್ ಪಾಲ್ ಅಪಾರ್ಟ್‍ಮೆಂಟ್‍ನಲ್ಲಿ ಕ್ವಾರಂಟೈನ್ ಆಗುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದರು. ಆದರೆ ಇದಾವುದನ್ನು ಲೆಕ್ಕಿಸದ ಪ್ರತಾಪ್, ಜುಲೈ 16ರಂದು ಹೊರಗೆ ಬಂದಿದ್ದ. ಹೀಗಾಗಿ ಪಶುವೈದ್ಯ ಹಾಗೂ ವಿಧಿ ವಿಜ್ಞಾನ ತಜ್ಞ ಡಾ.ಎಚ್.ಎಸ್.ಪ್ರಯಾಗ್ ತಲಘಟ್ಟಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು


Spread the love

About Laxminews 24x7

Check Also

ಬಸ್​​​ ನಿಲ್ಲಿಸಿಲ್ಲವೆಂದು ಚಾಲಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

Spread the loveಬೆಳಗಾವಿ, ಏ.25: ಬಸ್ ನಿಲ್ಲಿಸಿಲ್ಲ ಎಂದು ಸರ್ಕಾರಿ ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಮುಸ್ಲಿಂ ಯುವಕರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ