Breaking News

ಎಫ್‌ಐಆರ್ ದಾಖಲಿಸಲು ₹ 1 ಲಕ್ಷ ಲಂಚ: ಬೈಯಪ್ಪನಹಳ್ಳಿ ಠಾಣೆ ಪಿಎಸ್‌ಐ ಸೌಮ್ಯಾ ಬಂಧನ

Spread the love

ಬೆಂಗಳೂರು: ಪ್ರಕರಣವೊಂದರಲ್ಲಿ‌ ಎಫ್‌ಐಆರ್ ದಾಖಲಿಸಲು ದೂರುದಾರರಿಂದ ₹ 1 ಲಕ್ಷ ಲಂಚ ಪಡೆಯುತ್ತಿದ್ದ ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸೌಮ್ಯಾ ಮತ್ತು ಹೆಡ್ ಕಾನ್ ಸ್ಟೆಬಲ್ ಜೆ.ಪಿ. ರೆಡ್ಡಿ ಎಂಬುವವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಂಗಳವಾರ ಬಂಧಿಸಿದೆ.

ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲೇ ಲಂಚದ ಹಣ ಪಡೆಯುತ್ತಿದ್ದಾಗ ದಾಳಿಮಾಡಿದ ಎಸಿಬಿ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ನಡೆಯುತ್ತಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಎಸಿಬಿ ಕಾರ್ಯಾಚರಣೆ ವೇಳೆ ಠಾಣೆಯಲ್ಲಿದ್ದ ಮತ್ತೊಬ್ಬ ಕಾನ್ಸ್ಟೆಬಲ್ ಓಡಿಹೋಗಲು ಯತ್ನಿಸಿ ಜಾರಿ ಬಿದ್ದಿದ್ದು, ಅವರ ಕಾಲಿನ ಮೂಳೆ ಮುರಿದಿದೆ.

ಪಿಎಸ್‌ಐ ಸೌಮ್ಯಾ ಲಂಚದ ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ಠಾಣೆಯೊಳಕ್ಕೆ ದಾಳಿ ಮಾಡಿದರು.‌ ಆಗ ಇನ್ನೊಬ್ಬ ಆರೋಪಿ ಜೆ.ಪಿ.

ರೆಡ್ಡಿ ಸೇರಿದಂತೆ ಕೆಲವು ಕಾನ್ಸ್ಟೆಬಲ್ ಗಳು ಠಾಣೆಯಲ್ಲಿದ್ದರು. ಒಬ್ಬರು ಭಯದಿಂದ ಓಡಿಹೋಗಲು ಯತ್ನಿಸಿ ಜಾರಿ ಬಿದ್ದಿದ್ದಾರೆ. ಅವರ ಕಾಲಿಗೆ ಪೆಟ್ಟಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ