Breaking News

ಬೆಳಗಾವಿ ನಮ್ಮದು, ಮಹಾರಾಷ್ಟ್ರ ಸಿಎಂ ಠಾಕ್ರೆಗೆ ಸಿದ್ಧರಾಮಯ್ಯ ಖಡಕ್ ವಾರ್ನಿಗ್

Spread the love

ಬೆಂಗಳೂರು : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದ ಮಹಾರಾಷ್ಟ್ರ ಸಿಎಂ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವಿಟ್ ಮೂಲಕ ಕಿಡಿಕಾರಿದ್ದಾರೆ.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿ ಬಗ್ಗೆ ಉದ್ಧವ್ ಠಾಕ್ರೆ ನೀಡಿರುವುದು ಅಧಿಕಪ್ರಸಂಗತನದ ಹೇಳಿಕೆ.
ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವ ಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ. ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಬೆಳಗಾವಿ ನಮ್ಮದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

Spread the loveಬೆಂಗಳೂರು: ಗ್ಯಾರಂಟಿ ಯೋಜನೆಗಳ  ಪರಿಷ್ಕರಣೆ ಮಾಡುತ್ತೇವೆ, ಆದರೆ ಸಿಎಂ, ಸಚಿವರು ಇನ್ನೂ ಈ ಬಗ್ಗೆ ಮಾತನಾಡಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ