ಬೆಂಗಳೂರು : ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು, ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಭಾಷಣ ಆರಂಭಿಸುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಭಿತ್ರಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆಯೂ ಸಹ ರಾಜ್ಯಪಾಲರು ಭಾಷಣ ಆರಂಭಿಸಿದರು. ಕೊರೊನಾ ವಿರುದ್ಧ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಸರ್ಕಾರದ ನಿಯಮವನ್ನು ಜನರು ಅಚ್ಚುಕಟ್ಟಾಗಿ ಪಾಲಿಸಿದ್ದು, ಕೊರೊನಾ ವಾರಿಯರ್ಸ್ ಗೆ ಧನ್ಯವಾದಗಳು ಎಂದರು.
ಕೊರೊನಾಗೆ ಬಲಿಯಾದ ವಾರಿಯರ್ಸ್ ಗೆ ಸರ್ಕಾರ 30 ಲಕ್ಷ ರೂ. ಪರಿಹಾರ ಘೋಷಿಸಿದೆ. ವೈದ್ಯಕೀಯ ಕ್ಷೇತ್ರದಲ್ಲಿ ರಾಜ್ಯ ಮುಂಜೂಣಿಯಲ್ಲಿದೆ. ರಾಜ್ಯದಲ್ಲಿರುವ ಆಸ್ಪತ್ರೆಗಳ ಅಭಿವೃದ್ಧಿ ಮಾಡಲಾಗಿದೆ ಎಂದು ಹೇಳಿದರು.
ಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿ ಮಾಡಿದ್ದು, ಉದ್ಯೋಗ ಸೃಷ್ಟಿ ಪ್ರಮಾಣವೂ ಹೆಚ್ಚುತ್ತಿದೆ. ವಿದ್ಯುತ್ ಉತ್ಪಾದನೆಯಲ್ಲಿ ಅಭಿವೃದ್ಧಿ ಸಾಧಿಸಿದ್ದು, ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ಯಶಸ್ವಿಯಾಗಿದ್ದೇವೆ ಎಂದರು.