Breaking News

ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ

Spread the love

ಬೆಂಗಳೂರು : ವಿಧಾನಪರಿಷತ್ ನ ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಪಕ್ಷದ ಮುಖಂಡರೊಂದಿಗೆ ಆಗಮಿಸಿ, ಇಂದು ಬೆಳಗ್ಗೆ ವಿಧಾನಸಭೆಯ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಒಂದು ವೇಳೆ ಉಪಸಭಾಪತಿ ಸ್ಥಾನಕ್ಕೆ ಯಾರೊಬ್ಬರೂ ನಾಮಪತ್ರ ಸಲ್ಲಿಸದಿದ್ದರೆ ಪ್ರಾಣೇಶ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಹಾಗೊಂದು ವೇಳೆ ಕಾಂಗ್ರೆಸ್‍ನಿಂದ ನಾಮಪತ್ರ ಸಲ್ಲಿಕೆಯಾದರೂ ಚುನಾವಣೆಯಲ್ಲಿ ಪ್ರಾಣೇಶ್ ಅವರೇ ವಿಜೇತರಾಗುವುದು ಖಚಿತ. ಈಗಾಗಲೇ ಪರಿಷತ್‍ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಪ್ರಾಣೇಶ್ ಅವರ ಆಯ್ಕೆಗೆ ದಾರಿ ಸುಗಮವಾಗಿದೆ.

ಈ ಹಿಂದೆ ಉಪಸಭಾಪತಿಯಾಗಿದ್ದ ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯುವುದು ಅನಿವಾರ್ಯವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ