Breaking News

ಮೋಕ್ಷ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ

Spread the love

ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ತರಳು ಗ್ರಾಮದಲ್ಲಿರುವ ಮೋಕ್ಷ ಅಗರಬತ್ತಿ ಕಾರ್ಖಾನೆಯಲ್ಲಿ ಶುಕ್ರವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಅವಘಾಡ ಸಂಭವಿಸಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ.

ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಹೊರಗಡೆ ಓಡಿ ಹೋಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ಕಾರ್ಖಾನೆಯ ಕಾರ್ಮಿಕರು ಸಹ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ.

ಕಾರ್ಖಾನೆಯಲ್ಲಿನ ಕೆಲವಸ್ತುಗಳು ಬೆಂಕಿಗಾಹುತಿಯಾಗಿವೆ. ಯಾವುದೇ ಪ್ರಾಣಹಾನಿಯಾಗಿಲ್ಲ. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

Spread the loveಬೆಂಗಳೂರು: ಗ್ಯಾರಂಟಿ ಯೋಜನೆಗಳ  ಪರಿಷ್ಕರಣೆ ಮಾಡುತ್ತೇವೆ, ಆದರೆ ಸಿಎಂ, ಸಚಿವರು ಇನ್ನೂ ಈ ಬಗ್ಗೆ ಮಾತನಾಡಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ