Breaking News

ಸಾಹಿತಿಗಳು, ನಟ-ನಟಿಯವರು ರೈತರ ಪ್ರತಿಭಟನೆ ಬೆಂಬಲಿಸಬೇಕು: ಮಾಜಿ ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ರೈತರ ಪ್ರತಿಭಟನೆಗೆ ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ನಟ-ನಟಿಯರು ಬೆಂಬಲಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

 

ರೈತರ ಪರವಾಗಿ ಬೆಂಬಲ ನೀಡುವಂತೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು.‌ ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ? ಎಂದು ಟ್ವೀಟ್ ಮಾಡಿದ್ದಾರೆ.

 

ಕೃಷಿ ಕಾಯ್ದೆ ವಿರುದ್ದ ರೈತರು ರಾಷ್ಟ್ರ ರಾಜಧಾನಿಯಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆಗೆ ವಿದೇಶ ಕಲಾವಿದರು ಧ್ವನಿ ಎತ್ತುತ್ತಿದ್ದಾರೆ.ಆದ್ರೆ ದೇಶದ ಯಾವೊಬ್ಬ ಕಲಾವಿದರು ಈ ಬಗ್ಗೆ ತುಟಿ ಬಿಚ್ಚದಿರುವುದು ವಿಪರ್ಯಾಸ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ