Breaking News
Home / new delhi / ರಾಜ್ಯಾದ್ಯಂತ ಮುಂದಿನ ಐದು ದಿನ ಭಾರೀ ಮಳೆ : ಮುನ್ಸೂಚನೆ ನೀಡಿದ ಹವಮಾನ ಇಲಾಖೆ

ರಾಜ್ಯಾದ್ಯಂತ ಮುಂದಿನ ಐದು ದಿನ ಭಾರೀ ಮಳೆ : ಮುನ್ಸೂಚನೆ ನೀಡಿದ ಹವಮಾನ ಇಲಾಖೆ

Spread the love

ಬೆಂಗಳೂರು: ಮುಂದಿನ ಐದು ದಿನ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೊದಲ ಮೂರು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ನಂತರದ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳು ಮಳೆ ಸಾಧ್ಯತೆ ಇದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದು ನಾಳೆ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇವತ್ತು ಬೆಳಗಾವಿ, ಧಾರವಾಡ, ಗದಗ, ಹಾವೇರಿ,ರಾಯಚೂರು ಜಿಲ್ಲೆಗಳಿಗೆ ಯಲ್ಲೊ ಅಲರ್ಟ್, ನಾಳೆ ಧಾರವಾಡ, ಹಾವೇರಿ ಗದಗ ಕೊಪ್ಪಳ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಒಳನಾಡಿನಲ್ಲೂ ಮುಂದಿನ ಮೂರು ದಿನ ವ್ಯಾಪಕ ಮಳೆ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಇಂದು ಬಳ್ಳಾರಿಗೆ ಯಲ್ಲೋ, ಉಳಿದೆಲ್ಲ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ.ನಾಳೆ ಬೆಂಗಳೂರು, ಚಿತ್ರದುರ್ಗ, ದಾವಣಗೆರೆ ರಾಮನಗರ,ತುಮಕೂರು, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಿದ್ದು, ಮೂರನೇ ದಿನ ಬಳ್ಳಾರಿ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ,ಕೊಡಗು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


Spread the love

About Laxminews 24x7

Check Also

ಅರ್ಥಿಂಗ್ ಸಮಸ್ಯೆ – ಶೌಚಾಲಯಕ್ಕೆ ಬೀಗ, ಬಹಿರ್ದೆಸೆಗೆ ಮಹಿಳೆಯರ ಅಲೆದಾಟ

Spread the loveಸಿಂಧನೂರು: ನಗರದ ವಾರ್ಡ್ ನಂ.19ರ ವ್ಯಾಪ್ತಿಗೊಳಪಡುವ ಶರಣಬಸವೇಶ್ವರ ಕಾಲೊನಿಯಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ