Breaking News

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ

Spread the love

 

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಮಧ್ಯಾಹ್ನ 11.30ಕ್ಕೆ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಲಿದೆ.

ಬಿಜೆಪಿ , ಕಾಂಗ್ರೆಸ್ ಮತ್ತು ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿವೆ. ಗ್ರಾಮ ಪಂಚಾಯಿತಿ ಗೆಲುವಿಗೆ ತಂತ್ರ ಪ್ರತಿತಂತ್ರಗಳನ್ನು ರೂಪಿಸುವ ಮೂಲಕ ಮತ್ತೊಂದು ಮತ ಸಮರಕ್ಕೆ ಇಳಿಯಲಿವೆ.

ಬಿಜೆಪಿ ಈಗಾಗಲೇ ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದೆ. ಜೆಡಿಎಸ್ ಕೂಡ ಪ್ರಮುಖರ ಸಭೆ ನಡೆಸಿ ತೊಡೆ ತಟ್ಟಲು ರೆಡಿಯಾಗಿದೆ. ಕಾಂಗ್ರೆಸ್ ಈಗ ತಾನೆ ಚುನಾವಣಾ ತಯಾರಿಗೆ ಮುಂದಾಗಿದೆ. ಜತೆಗೆ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರ ಸಭೆಯನ್ನು ನಡೆಸುತ್ತಿದ್ದಾರೆ.

ಸುಮಾರು 5800 ಗ್ರಾಮ ಪಂಚಾಯಿತಿಗಳ 85000 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಬೇರು ಮಟ್ಟದಲ್ಲಿ ಪಕ್ಷ ಬಲವರ್ಧನೆಗೆ ಈ ಚುನಾವಣೆ ಪ್ರಮುಖ‌ ಪಾತ್ರವಹಿಸಲಿದೆ. ಹಾಗಾಗಿ ಈ ಚುನಾವಣೆಯನ್ನು ಮೂರು ರಾಜಕೀಯ ಪಕ್ಷಗಳು ಪ್ರತಿಷ್ಠೆಯ ಪ್ರಶ್ನೆಯನ್ನಾಗಿಸಿಕೊಳ್ಳಲಿವೆ.

ಚುನಾವಣೆ ದಿನಾಂಕ ಪ್ರಕಟಗೊಂಡ ಆ ಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಎಲ್ಲ ಹೊಸ ಅಭಿವೃದ್ಧಿ ಕಾರ್ಯಗಳ ಶಂಕು ಸ್ಥಾಪನೆ ಉದ್ಘಾಟನೆಗೆ ಬ್ರೇಕ್ ಬೀಳಲಿದೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ