Breaking News
Home / new delhi / ಸಂವಿಧಾನದ ಆಶಯದಂತೆ ಸಹಬಾಳ್ವೆಯಿಂದ ಬದುಕುವಂತಾಗಲಿ: ಸಚಿವ ಗೋವಿಂದ ಕಾರಜೋಳ

ಸಂವಿಧಾನದ ಆಶಯದಂತೆ ಸಹಬಾಳ್ವೆಯಿಂದ ಬದುಕುವಂತಾಗಲಿ: ಸಚಿವ ಗೋವಿಂದ ಕಾರಜೋಳ

Spread the love

ಬೆಳಗಾವಿ: ‘ಸರ್ವಜನಾಂಗದ ಶಾಂತಿಯ ತೋಟ’ವೆಂದು ರಾಷ್ಟಕವಿ ಕುವೆಂಪು ಅವರು ಕರ್ನಾಟಕವನ್ನು ವ್ಯಾಖ್ಯಾನಿಸಿದ್ದಾರೆ. ಇಂತಹ ತೋಟದಲ್ಲಿ ನಾವೆಲ್ಲಾ ಸಾಮರಸ್ಯದಿಂದ ಬೆಳೆದುನಿಂತ ಫಲಪುಷ್ಪಗಳು. ಈ ನೆಲದ ಮಣ್ಣಿನ ಗುಣ, ಗಣತಂತ್ರ ವ್ಯವಸ್ಥೆಯ ಮತ್ತು ಸಂವಿಧಾನದ ಮೂಲ ಆಶಯಗಳನ್ನಿಟ್ಟುಕೊಂಡು ಎಲ್ಲರೂ ಸಹಬಾಳ್ವೆಯಿಂದ ಬದುಕಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ನೀರಾವರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

ಅವರು ನಗರದಲ್ಲಿ ಗಣರಾಜ್ಯೋತ್ಸವ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಗಣರಾಜ್ಯ ದಿನವು ದೇಶದ ನಾಗರಿಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದೆ. ನಮ್ಮ ಸಂವಿಧಾನವನ್ನು ಒಪ್ಪಿಕೊಂಡ ದಿನವಿದು. ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ದಿನವಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಅವರಂಥಹ ಮಹಾನ್ ಮಾನವತಾವಾದಿಗಳು ರಾಷ್ಟçದ ಅಭಿವೃದ್ಧಿಯ ಬಗೆಗೆ ಹಗಲಿರುಳೆನ್ನದೆ ಚಿಂತಿಸಿ ರಚಿಸಿದ ಭವ್ಯಭಾರತದ ಸತ್ಸಂಕಲ್ಪ ಇದು.

ಬೆಳಗಾವಿ ಜಿಲ್ಲೆ ವಿಸ್ತಾರದಲ್ಲೂ ವಿನ್ಯಾಸದಲ್ಲೂ ಚಾರಿತ್ರಿಕವಾಗಿ ತನ್ನದೇ ಆದ ಮಹತ್ವವನ್ನು ದಾಖಲಿಸಿದೆ. ರಾಷ್ಟ ಭಕ್ತಿಯು ಜಿಲ್ಲೆಯ ಜನತೆಯ ರಕ್ತ ಹಾಗೂ ನರನಾಡಿಗಳಲ್ಲಿ ಹರಿದಾಡುತ್ತಿದೆ. ಸ್ವಾತಂತ್ರ್ಯದ ಪೂರ್ವದಲ್ಲಿಯೇ ನಮ್ಮ ಜಿಲ್ಲೆಯ ಹೋರಾಟಗಾರರ ಕೊಡುಗೆ ಅನುಪಮವಾದುದು. ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣರಿಂದ ಹಿಡಿದು ಗಂಗಾಧರರಾವ್ ದೇಶಪಾಂಡೆಯವರವರೆಗೆ ಸಾವಿರಾರು ದೇಶಭಕ್ತರು ಸ್ವಾತಂತ್ರ್ಯಕ್ಕಾಗಿ ಈ ನೆಲದಲ್ಲಿ ತ್ಯಾಗ ಬಲಿದಾನಗಳಿಗೆ ತಮ್ಮನ್ನು ಸಮರ್ಪಿಸಿಕೊಂಡರು. ಈ ನೆಲವು ಗಾಂಧೀಜಿ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾತ್ಮರು ನಡೆದಾಡಿದ ನೆಲವಾಗಿದೆ. ಚನ್ನಮ್ಮ, ರಾಯಣ್ಣರು ಸ್ವಾಭಿಮಾನಕ್ಕಾಗಿ ಆತ್ಮ ಸಮರ್ಪಣೆ ಮಾಡಿಕೊಂಡ ನೆಲ. ಮಧ್ಯಯುಗೀನ ಚರಿತ್ರೆಯಲ್ಲಿ ಶರಣರು ನಡೆದಾಡಿದ ವೀರ ತಪೋಭೂಮಿ ಎಂದು ಬಣ್ಣಿಸಿದರು.

ಡಾ. ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ, ಚಿಂತನೆಯ ಫಲವಾಗಿ ನಾವಿಂದು ಜಗತ್ತಿಗೆ ಮಾದರಿಯಾದ ಸಂವಿಧಾನದ ವಾರಸುದಾರರಾಗಿದ್ದೇವೆ. ಪರಕೀಯರ ಆಡಳಿತದಲ್ಲಿದ್ದ ಭಾರತವು ಕೇವಲ 75 ವರ್ಷಗಳಲ್ಲಿ ಅತ್ಯಂತ ಬಲಿಷ್ಠ ಪ್ರಜಾತಂತ್ರ ರಾಷ್ಟವಾಗಿ ಹೊರಹೊಮ್ಮಲು ಈ ಸಂವಿಧಾನವೇ ಮಾರ್ಗದರ್ಶಿಯಾಗಿದೆ.

ಗಣತಂತ್ರ ಭಾರತವು ಭಾರತದ ಪ್ರತಿ ಪ್ರಜೆಗೂ ಪರಮಾಧಿಕಾರವನ್ನು ಘೋಷಿಸಿದೆ. ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ನೀಡುವುದರ ಮೂಲಕ ಮೂಲಭೂತ ಹಕ್ಕುಗಳನ್ನು ದಯಪಾಲಿಸಿದೆ. ಸಾಮಾಜಿಕ ನ್ಯಾಯ, ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರಂತ್ರ್ಯಗಳು ನಮ್ಮ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ ಎದು ಅವರು ಹೇಳಿದರು.
ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಜತೆ ಗಡಿ ಹಂಚಿಕೊಂಡಿರುವ ನಮ್ಮ ಬೆಳಗಾವಿ ಜಿಲ್ಲೆ ಕರ್ನಾಟಕದ ಜಿಲ್ಲೆಗಳಲ್ಲಿ ಹಿರಿದಾದ ಸ್ಥಾನಪಡೆದಿದೆ. ಇಲ್ಲಿನ ಜನರು ಧರ್ಮ ಸಹಿಷ್ಣುಗಳು. ಭಾಷಾ ವೈವಿಧ್ಯತೆಯ ನಡುವೆಯೂ ಏಕತೆಯನ್ನು ಮೆರೆದವರು; ಅದಕ್ಕಾಗಿ ಅವರನ್ನು ಅಭಿನಂದಿಸುತ್ತಿದ್ದೇನೆ.
ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನ ಮತ್ತು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರವು ಕೋವಿಡ್, ಪ್ರವಾಹ, ಆರ್ಥಿಕ ಹಿಂಜರಿತ ಸೇರಿದಂತೆ ಹತ್ತಾರು ಸವಾಲುಗಳ ನಡುವೆಯೂ ನೀರಾವರಿ ಸೌಲಭ್ಯ ವಿಸ್ತರಣೆ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ.

ನಮ್ಮ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪರಿಹಾರೋಪಾಯ ಕಾರ್ಯಗಳನ್ನು ಕೈಗೊಂಡು ಇಡೀ ದೇಶಕ್ಕೆ ಮಾದರಿಯಾಗಿದೆ. ಇದಲ್ಲದೇ ನವೋದ್ಯಮಗಳ ಸ್ಥಾಪನೆ, ಕೈಗಾರಿಕಾ ಸೌಲಭ್ಯಗಳ ವಿಸ್ತರಣೆ, ಬಂಡವಾಳ ಹೂಡಿಕೆಗೆ ಅನುಕೂಲಕರ ವಾತಾವರಣ ನಿರ್ಮಾಣ ಹಾಗೂ ಜಿ.ಎಸ್.ಟಿ. ಸಂಗ್ರಹದಲ್ಲೂ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇತ್ತೀಚೆಗೆ ವಿಧಾನಮಂಡಲ ಚಳಿಗಾಲ ಅಧಿವೇಶನವನ್ನು ಅತ್ಯಂತ ಅಚ್ಚುಕಟ್ಟಾಗಿ ನಡೆಸಿದ ಕರ್ನಾಟಕ ಸರ್ಕಾರವು ಈ ಅಧಿವೇಶನ ಸಂದರ್ಭದಲ್ಲಿ ಉತ್ತರ ಕರ್ನಾಟಕದ 13 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಿದೆ.

ಈ ಭಾಗದ ಜನರ ಬಹುದಿನಗಳ ಕನಸಾಗಿರುವ ಕಳಸಾ-ಬಂಡೂರಿ ನಾಲಾ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಆದಷ್ಟು ಶೀಘ್ರದಲ್ಲೇ ಕಾಮಗಾರಿ ಅನುಷ್ಠಾನಕ್ಕೆ ಚಾಲನೆ ನೀಡಲು ಉದ್ದೇಶಿಸಲಾಗಿದೆ.
ಗಡಿ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿರುತ್ತದೆ. ಮಾನ್ಯ ಮುಖ್ಯಮಂತ್ರಿಗಳು ಈ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ ಮುಂಬೈ-ಕರ್ನಾಟಕ ಭಾಗವನನ್ನು “ಕಿತ್ತೂರು-ಕರ್ನಾಟಕ” ಎಂದು ನಾಮಕರಣ ಮಾಡುವುದಾಗಿ ನೀಡಿದ್ದ ಭರವಸೆಯನ್ನು ಈಗಾಗಲೇ ಈಡೇರಿಸಿದ್ದಾರೆ.
ಅದೇ ರೀತಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಘೋಷಣೆ ಮಾಡಿದ್ದಲ್ಲದೇ ಈ ಬಾರಿ ಅಕ್ಷರಶಃ ಪಾಲಿಸಿದ್ದಲ್ಲದೇ ಸ್ವತಃ ಜ್ಯೋತಿಯಾತ್ರೆಗೆ ಚಾಲನೆ ನೀಡಿರುತ್ತಾರೆ. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ವಿಷಯ ಜಿಲ್ಲೆಯ ಜನರಲ್ಲಿ ಸಂತಸ ಮೂಡಿಸಿದೆ.
ಇದಲ್ಲದೇ ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೂ ಸರಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.


Spread the love

About Laxminews 24x7

Check Also

ಬಿಜೆಪಿ ಶಾಸಕ ಮಹಿಳೆ ಜೊತೆ ಇದ್ದ ಅಶ್ಲೀಲ ಪೋಟೋ ವೈರಲ್ ?

Spread the loveಬೆಳಗಾವಿ : ರಾಜ್ಯದಲ್ಲಿ ಸಧ್ಯ ಚುನಾವಣಾ ಕಾವು ಜೋರಾಗಿದ್ದು ಈ ಹಂತದಲ್ಲೇ ಬಿಜೆಪಿ ಶಾಸಕ ಮಹಿಳೆ ಜೊತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ