ಬೆಂಗಳೂರು: ಗೆಳೆಯ ಬುಲೆಟ್ ಪ್ರಕಾಶ್ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ನೋವು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ದೇವರು ನೀಡಲಿ ಎಂದು ಹಾಸ್ಯ ನಟ ರಂಗಾಯಣ ರಘು ಹೇಳಿದ್ದಾರೆ.
ನಾನು ಹಾಗೂ ಬುಲೆಟ್ ಪ್ರಕಾಶ್ ಹೋಗೋ ಬಾರೋ ಫ್ರೆಂಡ್ಸ್. ಅವರಿಗೆ ನಾನಷ್ಟೇ ಅಲ್ಲ ದೊಡ್ಡ ಸಂಖ್ಯೆಯ ಸ್ನೇಹ ಬಳಗವೇ ಇದೆ. ಪ್ರಕಾಶ್ ಅವರ ಏರಿಯಾದಲ್ಲಿ ಅನೇಕ ಸ್ನೇಹಿತರಿದ್ದಾರೆ. ಎಲ್ಲರೊಂದಿಗೂ ಹಾಸ್ಯವಾಗಿ, ನಗು ಮುಖದಿಂದ ಇರುತ್ತಿದ್ದರು. ಎಲ್ಲವನ್ನೂ ತಮಾಷೆಯಾಗಿ ತೆಗೆದುಕೊಳ್ಳುತ್ತಿದ್ದ ಎಂದು ನೆನೆದರು
ನೇರ ನುಡಿಯ ಗೆಳೆಯ ಪ್ರಕಾಶ್ ರಾಜಕೀಯ ಕನಸು ಕಂಡಿದ್ದ. ಅದರಂತೆ ಸಿದ್ಧತೆ ಕೂಡ ನಡೆಸಿದ್ದ. ಆದರೆ ಪ್ರಕಾಶ್ ಚಿಕ್ಕ ವಯಸ್ಸಿನಲ್ಲಿಯೇ ನಮ್ಮನ್ನ ಅಗಲಿದ್ದು ಭಾರೀ ನೋವು ತಂದಿದೆ. ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ ಎಂದು ರಂಗಾಯಣ ರಘು ಹೇಳಿದರು.