Breaking News

ಮನೆಗಳ್ಳತನ ಮಾಡಿದ ಕಳ್ಳ ಅರೆಸ್ಟ್

Spread the love

ಹಗಲು ಮನೆ ಕಳ್ಳತನ ಪ್ರಕರಣವನ್ನು ಬೈಲಹೊಂಗಲ ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತರಿಂದ ₹5.49 ಲಕ್ಷ ಮೌಲ್ಯದ 58 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 12ರಂದು ಮಹಾಂತೇಶ ಬಸಪ್ಪ ಬೋಗೂರ ಹಾಗೂ ಅವರ ಕುಟುಂಬಸ್ಥರು ಜಮೀನಿನಲ್ಲಿ ಸೋಯಾಬಿನ್ ಬೆಳೆಗೆ ಕೀಟನಾಶಕ ಸಿಂಪಡಿಸಲು ತೆರಳಿದ್ದ ವೇಳೆ, ಮನೆಗೆ ಹಾಕಿದ್ದ ಬೀಗವನ್ನು ಮುರಿದು ಕಳ್ಳರು ಒಳನುಗ್ಗಿದ್ದರು. ಮನೆಯ ಟ್ರೆಜರಿಯಲ್ಲಿ ಇರಿಸಿದ್ದ 58 ಗ್ರಾಂ ಚಿನ್ನಾಭರಣಗಳು ಹಾಗೂ ₹48 ಸಾವಿರ ನಗದನ್ನು ಕಳ್ಳತನ ಮಾಡಲಾಗಿತ್ತು.

ಈ ಕುರಿತು ಮಹಾಂತೇಶ ಬೋಗೂರ ಅವರು ನೀಡಿದ ದೂರಿನ ಮೇರೆಗೆ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ನಡೆಸಿ, 24 ಗಂಟೆಗಳಲ್ಲೇ ಪ್ರಕರಣವನ್ನು ಭೇದಿಸಿ ಜುಲೈ 16ರಂದು ಚಿವಟಗುಂಡಿ ಗ್ರಾಮದ ಪ್ರಕಾಶ ರಾಯಪ್ಪ ಮಲ್ಲೂರ (40) ಎಂಬಾತನನ್ನು ಬಂಧಿಸಿದರು.

ಆರೋಪಿಯಿಂದ ಕಳ್ಳತನವಾಗಿದ್ದ ₹5.49 ಲಕ್ಷ ಮೌಲ್ಯದ 58 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಳುವಾಗಿದ್ದ ₹48 ಸಾವಿರ ನಗದು ಕುರಿತು ತನಿಖೆ ಮುಂದುವರಿದಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ. ಬಸರಗಿ ಹಾಗೂ ಬೈಲಹೊಂಗಲ ಉಪವಿಭಾಗದ ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಅವರ ಮಾರ್ಗದರ್ಶನದಲ್ಲಿ, ಪಿಐ ಪ್ರಮೋದ ಯಲಿಗಾರ ನೇತೃತ್ವದ ವಿಶೇಷ ತಂಡ ಈ ಕಾರ್ಯಾಚರಣೆ ನಡೆಸಿತ್ತು.

ಕಾರ್ಯಾಚರಣೆಯಲ್ಲಿ ಎಎಸ್‌ಐ ಕೆ.ಆರ್. ಇಮಾಮನವರ, ಚೇತನ ಬುದ್ನಿ, ಮಲ್ಲಪ್ಪ ಗಿಡಗೇರಿ, ಸಿದ್ದಾರೂಡ ಬಡಬಡೇ, ಕೆ.ಬಿ. ಮಾದಿನ್ನಿ, ಐ.ಬಿ. ಹುಡೆದ, ಮಂಜುನಾಥ ಅವರಾದಿ ಹಾಗೂ ಸಯ್ಯದ ಅರವಳ್ಳಿ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಕರಣವನ್ನು ಶೀಘ್ರದಲ್ಲೇ ಭೇದಿಸಿ ಕಳ್ಳನನ್ನು ಬಂಧಿಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ.

Spread the love

About Laxminews 24x7

Check Also

ದಿಲ್ಲಿಯಲ್ಲಿ ಬಿಡಾರ ಹೂಡಿರುವ ಶಾಸಕರನ್ನ ಹೈಕಮಾಂಡ್ ಮರಳಿ ರಾಜ್ಯಕ್ಕೆ ಕಳಿಸಬೇಕು: ಯತ್ನಾಳ್

Spread the loveವಿಜಯಪುರ: ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಿಡಾರ ಹೂಡಿರುವವರನ್ನ ಕಾಂಗ್ರೆಸ್‌ ಹೈಕಮಾಂಡ್‌ ಮರಳಿ ರಾಜ್ಯಕ್ಕೆ ಕಳುಹಿಸಬೇಕು ಎಂದು ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ