Breaking News

ಟ್ಯಾಂಕರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ – ನಾಲ್ವರು ಸಜೀವ ದಹನ, 10 ಮಂದಿಗೆ ಗಾಯ

Spread the love

ಗಾಂಧಿನಗರ: ಟ್ಯಾಂಕರ್‌ಗೆ ಡಿಕ್ಕಿಯಾಗಿ ಬಸ್ ಹೊತ್ತಿ ಉರಿದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಗುಜರಾತ್‌ನ  ಸುರೇಂದ್ರನಗರ ಜಿಲ್ಲೆಯ ಚೋಟಿಲಾ-ರಾಜ್‌ಕೋಟ್ ರಾಷ್ಟ್ರೀಯ ಹೆದ್ದಾರಿಯ ಸಂಗನಿ ಗ್ರಾಮದ ಬಳಿ ನಡೆದಿದೆ.

ಬೆಳಗಿನ ಜಾವ 2:30ರ ಸುಮಾರಿಗೆ ಈ ಅಪಘಾತ ನಡೆದಿದೆ. ಬಸ್‌ನಲ್ಲಿ 40 ಪ್ರಯಾಣಿಕರಿದ್ದರು. ಅದರಲ್ಲಿ 4 ಮಂದಿ ಸಾವನ್ನಪ್ಪಿ, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ಯಾಂಕರ್ ಏನನ್ನು ಹೊತ್ತೊಯ್ಯುತ್ತಿತ್ತು ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ಅಪಘಾತ ಎಷ್ಟು ಪ್ರಬಲವಾಗಿತ್ತೆಂದರೆ ಎರಡೂ ವಾಹನಗಳು ಕೆಲವೇ ಸೆಕೆಂಡುಗಳಲ್ಲಿ ಹೊತ್ತಿ ಉರಿದು ಹೋಗಿವೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಹಲವಾರು ಪ್ರಯಾಣಿಕರು ಬಸ್‌ನಿಂದ ಇಳಿದು ಪಾರಾಗಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಈ ಅಪಘಾತದಲ್ಲಿ ಗಾಯಗೊಂಡವರನ್ನು ರಾಜ್‌ಕೋಟ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್ – ಬಸ್‌ಪಾಸ್ ಶುಲ್ಕ ಮರುಪಾವತಿ; ಜೂ.29 ರಿಂದ ಅರ್ಜಿ ಪ್ರಕ್ರಿಯೆ ಶುರು

Spread the loveವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ? ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿದ್ದ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ