ಹಾವೇರಿ: ಬ್ಯಾಡಗಿ ತಾಲೂಕಿನ ಛತ್ರದ ಬಳಿ ಪ್ರವಾಸಿಗರಿದ್ದ ಬಸ್ , ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಪ್ರವಾಸಕ್ಕೆ ಬಂದಿದ್ದ ಬಸ್ ಬೆಂಗಳೂರಿನಿಂದ ಮಹಾರಾಷ್ಟ್ರಕ್ಕೆ ವಾಪಸ್ ಆಗುತ್ತಿತ್ತು. ಈ ವೇಳೆ ಛತ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಲಾರಿಗೆ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಚಾಲಕ ನಿದ್ರೆಯ ಮಂಪರಿನಲ್ಲಿದ್ದಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.
Laxmi News 24×7