Breaking News

ಬೆಳಗಾವಿಯಲ್ಲಿ ಸ್ಕೂಟರ್‌ನಿಂದ ಬಿದ್ದ ವೃದ್ಧನ ತಲೆ ಮೇಲೆ ಹರಿದ ಬಸ್

Spread the love

 ಬೆಳಗಾವಿ: ಸ್ಕೂಟರ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ವೃದ್ಧನ ತಲೆಗೆ ಹಿಂಬದಿಯಿಂದ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಮೂಡಲಗಿ ತಾಲೂಕಿನ ಶಿವಾಪೂರ ಗ್ರಾಮದ ಬಳಿ ಸಂಭವಿಸಿದೆ.

ಮೃತರನ್ನು ಹಳ್ಳೂರ ಗ್ರಾಮದ ನಿವಾಸಿ ಕೆಂಪಣ್ಣ ಕೌಜಲಗಿ (80) ಎಂದು ಗುರುತಿಸಲಾಗಿದೆ. ಕೆಂಪಣ್ಣ ಕೌಜಲಗಿ ಅವರು ಮೂಡಲಗಿ ಪಟ್ಟಣದಿಂದ ಶಿವಾಪೂರ ಮಾರ್ಗವಾಗಿ ತಮ್ಮ ಗ್ರಾಮವಾದ ಹಳ್ಳೂರಕ್ಕೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಶಿವಾಪೂರ ಗ್ರಾಮದ ಬಳಿ ಸ್ಕೂಟರ್ ಸ್ಕಿಡ್ ಆಗಿ ಅವರು ರಸ್ತೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಹಿಂಬದಿಯಿಂದ ಬಂದ ಗೋಕಾಕ–ಜಮಖಂಡಿ ಮಾರ್ಗದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅವರ ತಲೆಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ವೃದ್ಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಿಪ್ಪಾಣಿ–ಮುಧೋಳ ರಾಜ್ಯ ಹೆದ್ದಾರಿಯಲ್ಲಿ ರೈತರ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಹಾಲಿಂಗಪುರದ ಕಡೆಗೆ ತೆರಳುವ ವಾಹನಗಳನ್ನು ಪರ್ಯಾಯ ಮಾರ್ಗವಾಗಿ ಶಿವಾಪೂರ ಗ್ರಾಮದ ಮೂಲಕ ಸಂಚರಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಮಾರ್ಗದಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದು, ಇದೇ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಂಪಣ್ಣ ಕೌಜಲಗಿ ಅವರು ಕಳೆದ ಸುಮಾರು 20 ವರ್ಷಗಳಿಂದ ಹಳ್ಳೂರ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಯಲ್ಲಿ ಜೀವನೋಪಾಯಕ್ಕಾಗಿ ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ವೃದ್ಧನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಹಳ್ಳೂರ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ