ಬಸ್ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣ ಬೆಳೆಸುತ್ತಿದ್ದರು. ಬಸ್ ಗಂಗಾನಾಳ ಬಳಿ ಬರುತ್ತಿದ್ದಂತೆ ಏಕಾಏಕಿ ಮುಂಭಾಗದ ಚಕ್ರದ ಪಟ್ಟಿಯ ನಟ್ ಕಿತ್ತಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬಿಟ್ಟು ಪಕ್ಕದ ಹೊಲಕ್ಕೆ ನುಗ್ಗಿದೆ. ಬಸ್ ವೇಗ ಕಡಿಮೆ ಇದ್ದಿದ್ದರಿಂದ ದೊಡ್ಡ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ
ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಇತರ ವಾಹನ ಸವಾರರು ಸ್ಥಳಕ್ಕೆ ಧಾವಿಸಿ, ಪ್ರಯಾಣಿಕರನ್ನು ಬಸ್ನಿಂದ ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ.
Laxmi News 24×7