Breaking News

ಶಿವಮೊಗ್ಗದ ಲಾಡ್ಜ್‌ನಲ್ಲಿ ಕ್ರಷರ್ ಉದ್ಯಮಿ ಆತ್ಮಹತ್ಯೆ

Spread the love

ಶಿವಮೊಗ್ಗ: ಕ್ರಷರ್ ಉದ್ಯಮಿಯೊಬ್ಬರು ನಗರದ ಲಾಡ್ಜ್‌ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗೋಪಾಳ ಬಡಾವಣೆಯ ನಿವಾಸಿ ನವೀನ್ ಕುಮಾರ್ ಬಳಗಾರ್ ಅಲಿಯಾಸ್ ಬಸವರಾಜ್ (42) ಆತ್ಮಹತ್ಯೆಗೆ ಶರಣಾದ ಉದ್ಯಮಿ. ನಗರದ ಲಾಡ್ಜ್‌ ಒಂದರಲ್ಲಿ ಕೊಠಡಿ ಬಾಡಿಗೆಗೆ ಪಡೆದುಕೊಂಡು ಅಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಕಳೆದ 5 ವರ್ಷಗಳಿಂದ ಉದ್ಯಮದಲ್ಲಿ ಉಂಟಾಗಿದ್ದ ನಷ್ಟ ಹಾಗೂ ವಿಪರೀತ ಸಾಲದ ಹೊರೆಯಿಂದಾಗಿ ಅವರು ಮನನೊಂದಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ