Breaking News

ಅಂಜನಾದ್ರಿಯ ಆಂಜನೇಯನಿಗೆ 2.5 ಕೋಟಿ ಮೌಲ್ಯದ ಆಭರಣ ದೇಣಿಗೆ ನೀಡಿದ ಉದ್ಯಮಿ

Spread the love

ಕೊಪ್ಪಳ: ಇಲ್ಲಿನ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿಯ  ಆಂಜನೇಯನಿಗೆ ಉದ್ಯಮಿಯೊಬ್ಬರು 2.5 ಕೋಟಿ ರೂ. ಮೌಲ್ಯದ ಆಭರಣವನ್ನು ದೇಣಿಗೆ ನೀಡಿದ್ದಾರೆ.

ಎಎಂಆರ್ ಕನ್‌ಸ್ಟ್ರಕ್ಷನ್‌ ಕಂಪನಿಯ ಮಾಲೀಕ ಹಾಗೂ ಶಾಸಕ ಜನಾರ್ದನ ರೆಡ್ಡಿ  ಸ್ನೇಹಿತ ಮಹೇಶ ರೆಡ್ಡಿಯವರು ಅಂಜನಾದ್ರಿಯ ಆಂಜನೇಯನಿಗೆ 2.5 ಕೋಟಿ ರೂ. ಮೌಲ್ಯದ ಆಭರಣವನ್ನು ದೇಣಿಗೆ ನೀಡಿದ್ದಾರೆ. 

ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟ ಆಂಜನೇಯನ ಜನ್ಮಸ್ಥಳ. ಉದ್ಯಮಿ ಮಹೇಶ ಅವರು ದಂಪತಿ ಸಮೇತ ಅಂಜನಾದ್ರಿಗೆ ಆಗಮಿಸಿ, ಆಂಜನೇಯನಿಗೆ ಸಂಕಲ್ಪ ಪೂಜೆ, ಸುಪ್ರಭಾತ ಸೇವೆ ಸಲ್ಲಿಸಿದ್ದಾರೆ. ಪೂಜೆಯಲ್ಲಿ ಶಾಸಕ ಜನಾರ್ದನ ರೆಡ್ಡಿ ದಂಪತಿ ಹಾಗೂ ಮಹೇಶ ರೆಡ್ಡಿ ದಂಪತಿ ಭಾಗಿಯಾಗಿದ್ದರು.

ಪೂಜೆ ಬಳಿಕ 2.5 ಕೋಟಿ ರೂ. ಮೌಲ್ಯದ ಚಿನ್ನದ ಪ್ರಭಾವಳಿ, ಚಕ್ರ, ಕಿರೀಟ ಮತ್ತು ಗದೆಯನ್ನು ದೇಣಿಗೆ ರೂಪದಲ್ಲಿ ಗಂಗಾವತಿ ತಾಲೂಕು ಆಡಳಿತಕ್ಕೆ ಹಸ್ತಾಂತರ ಮಾಡಿದ್ದಾರೆ. ಈ ಮೂಲಕ ಅಂಜನಾದ್ರಿ ದೇವಸ್ಥಾನಕ್ಕೆ ಮೊದಲ ಬಾರಿಗೆ ದೊಡ್ಡ ಮೊತ್ತದ ಬಂಗಾರ ದೇಣಿಗೆಯಾಗಿ ಬಂದಿದೆ.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ