ಬೆಂಗಳೂರು,ಜ.20- ಉಪಚುನಾ ವಣೆಯಲ್ಲಿ ಗೆದ್ದವರ ಪರಿಸ್ಥಿತಿ ಅಂತರಪಿಶಾ ಚಿಗಳಂತಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಚಿವಾಕಾಂಕ್ಷಿಗಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಭೇಟಿಗೂ ಅವಕಾಶ ಕೊಡಲಿಲ್ಲ. ಒಂದು ವೇಳೆ ಸಂಪುಟ ವಿಸ್ತರಣೆ ಯಾದರೆ ನನಗಿರುವ ಮಾಹಿತಿ ಪ್ರಕಾರ ಸರ್ಕಾರದಲ್ಲಿ ಸ್ಫೋಟವಾಗುತ್ತದೆ ಎಂದು ಹೇಳಿದರು.
ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಮಂತ್ರಿ ಸ್ಥಾನ ಕೊಡೊಲ್ಲ. ಕೊಡದಿದ್ದರೆ ನೋಡಿಕೊಳ್ಳಿ ಅಂತ ಈಗಾಗಲೇ ವಿಶ್ವನಾಥ್ ಹೇಳಿದ್ದಾರೆ. ಮುಂದಿನ ನೀವೇ ನೋಡಿ ಏನಾಗುತ್ತದೆ ಎಂದರು.ರಾಜ್ಯದಲ್ಲಿ ಸರ್ಕಾರವೇ ಇಲ್ಲ. ಮೈತ್ರಿ ಸರ್ಕಾರದ ನಂತರ ಈ ಸರ್ಕಾರ ಬಂದು ಆರು ತಿಂಗಳಾಗಿದೆ. ಕೇವಲ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ಇನ್ನು ಮಂತ್ರಿಮಂಡಲ ಪೂರ್ಣ ಪ್ರಮಾಣದಲ್ಲಿ ರಚನೆಯಾಗಿಲ್ಲ. ಹೀಗಾಗಿ ಸರ್ಕಾರ ಟೇಕಾಫ್ ಆಗಿದೆ ಎಂದು ಹೇಳಲಾಗುವುದಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಸಿಎಎ ಜಾರಿಗೊಳಿಸಲು ಗೌರ್ನರ್‍ಗೆ ಪರಮಾಧಿಕಾರ ಇಲ್ಲ. ಚುನಾವಣೆ ವ್ಯವಸ್ಥೆಗಿಂತ ಯಾರೂ ದೊಡ್ಡವರಲ್ಲ. ಅವರು ಕೇಂದ್ರದಿಂದ ನೇಮಕವಾದವರು. ದೇಶದ 13 ರಾಜ್ಯಗಳು ವಿರೋಧ ಮಾಡಿವೆ. ಎನ್‍ಡಿಎ ಮಿತ್ರ ಪಕ್ಷಗಳು ವಿರೋಧ ಮಾಡುತ್ತಿವೆ. ನಿಮಗೆ ತಾಕಿತ್ತದ್ದರೆ ಮೈತ್ರಿ ಸರ್ಕಾರ ಇರುವ ಕಡೆ ಸರ್ಕಾರವನ್ನು ವಜಾ ಮಾಡಿ ಇಲ್ಲವೇ ಬೆಂಬಲವನ್ನು ವಾಪಸ್ ಪಡೆಯಿರಿ ಎಂದು ಸವಾಲು ಹಾಕಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ನೇಮಕವನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಯಾರು ಆಗಬೇಕು ಎಂಬುದನ್ನು ಹೈಕಮಾಂಡ್‍ಗೆ ತಿಳಿಸಿದ್ದೇನೆ. ಬೇಗ ನೇಮಕವಾಗಲಿ ಎಂದು ನಾನು ಹೇಳುತ್ತೇನೆ. ಯಾರೂ ನೇಮಕವಾಗಬೇಕೆಂದು ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ ಎಂದರು