Breaking News

ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು.

Spread the love

ಬೆಳಗಾವಿ,  ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು.

ಸೆ. 23ಕ್ಕೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಸಿಎಂ ಯಡಿಯೂರಪ್ಪ ಡೋಂಗಿ ರಾಜಕಾರಣಿ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಘನತೆಗೆ ತಕ್ಕುದಾಗಿ ಗೌರವದಿಂದ ನಡೆದುಕೊಳ್ಳಬೇಕು. ಸಿದ್ದರಾಮಯ್ಯ ಸಿಎಂ ಇದ್ದಾಗ ಮೂರು ಸಾವಿರ ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರಿಗೆ ಮರ್ಯಾದೆ ಇದ್ದರೆ ಮನೆಯಲ್ಲಿ ಕುಳಿತುಕೊಳ್ಳಬೇಕು. ಸಿದ್ದರಾಮಯ್ಯಗೆ ಯೋಗ್ಯತೆ ಏನಿದೆ. ರೈತರು ಆತ್ಮಹತ್ಯೆ ಮಾಡಿಕೊಂಡರೇ ಮನೆಗೆ ಭೇಟಿ ಮಾಡಲಿಲ್ಲ. ನಮ್ಮ ರಾಜ್ಯದಲ್ಲಿ ವೀರಪ್ಪನ್ ನಂತಹ ಹತ್ತಾರು ಹಂತಕರನ್ನು ಕಂಡಿದ್ದೇವೆ. ಅದೇ ರೀತಿಯಲ್ಲಿ ಕಾಂಗ್ರೆಸ್ ನವರು ಆಡಳಿತ ನಡೆಸಿದವರು ಎಂದು ನಳೀನ್ ಕಿಡಿಕಾರಿದರು.

ಟಿಪ್ಪು ಜಯಂತಿ ಹೆಸರಲ್ಲಿ ಗಲಭೆ ಸೃಷ್ಟಿಸಿದರು, ಲಿಂಗಾಯತರು ಮತ್ತು ವೀರಶೈವರು ಎಂದು ಸಮಾಜ ಒಡೆದರು. ಅಕಾರವನ್ನು ಉಳಿಸಬೇಕು ಅಂತಾ ಬ್ರಿಟೀಷರಿಗಿಂತ ಕಟ್ಟ ಕಡೆಯದಾಗಿ ಸಮಾಜವನ್ನು ಒಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ.

ಇಂತಹ ಕೆಟ್ಟ ಸಿಎಂ ಬೇಡ ಅಂತಾ ಮೈಸೂರಿನಲ್ಲಿ ಮನೆಗೆ ಕಳುಹಿಸಿದ್ದಾರೆ. ಎಲ್ಲೆಲ್ಲೋ ನಿಂತು ಗೆಲ್ಲುವ ಪರಿಸ್ಥಿತಿ ಒಬ್ಬ ಮುಖ್ಯಮಂತ್ರಿಗೆ ಬಂದಿದೆ ಜನ ತಿರಸ್ಕಾರ ಮಾಡಿದ್ದಾರೆ ಎಂದರು.


Spread the love

About Laxminews 24x7

Check Also

ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!!

Spread the love ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!! ಗಣೇಶೋತ್ಸವ ಕೇವಲ ಎಂಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ