Breaking News

ಸುರೇಶ್ ಅಂಗಡಿಯನ್ನ ಮುಖ್ಯಮಂತ್ರಿಯಾಗಿ ಮಾಡುವ ಸಭೆ ನಡೆದಿತ್ತಂತೆ: ಎಲ್ಲಿ, ಯಾವಾಗ?

Spread the love

ಬೆಳಗಾವಿ: ಕೇಂದ್ರ ಸಚಿವ, ಸ್ಥಳೀಯ ಸಂಸದ ಸುರೇಶ್ ಅಂಗಡಿ ಅಕಾಲಿಕ ಸಾವಿಗೀಡಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸುರೇಶ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ, ದಿ. ಸುರೇಶ್ ಅಂಗಡಿ ಸೋದರ ಮಾವ ಲಿಂಗರಾಜ್ ಪಾಟೀಲ್ ಅವರು ರಾಜ್ಯ ರಾಜಕೀಯದ ಮೇಲೆ ಹೊಸ ಬಾಂಬ್ ಹಾಕಿದ್ದಾರೆ.

 ನಾಲ್ಕು ತಿಂಗಳ ಹಿಂದೆ ಸುರೇಶ್ ಅಂಗಡಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡುವ ಕುರಿತು ಸಭೆ ನಡೆದಿತ್ತು.

ಕರ್ನಾಟಕ ಉಸ್ತುವಾರಿ ಮುರಳೀಧರ್‌ ರಾವ್ ನೇತೃತ್ವದಲ್ಲಿ ದೆಹಲಿಯಲ್ಲಿ ಆ ಸಭೆ ನಡೆದಿತ್ತು. ದೆಹಲಿಯ ಪ್ರಮುಖ ನಾಯಕರು ಅಂದು ಆ ಸಭೆಯಲ್ಲಿ ಭಾಗಿಯಾಗಿದ್ದರು. ಕೆಲವೇ ದಿನಗಳಲ್ಲಿ ನಿಮ್ಮನ್ನ ಸಿಎಂ ಮಾಡುವ ಕುರಿತು ಚರ್ಚೆ ನಡೆದಿದೆ. ಒಳ್ಳೆಯ, ಸಜ್ಜನ ರಾಜಕಾರಣಿ ಮತ್ತು ಲಿಂಗಾಯತ ಮುಖಂಡ ಎಂಬ ಕಾರಣಕ್ಕೆ ನಿಮ್ಮ ಆಯ್ಕೆಯಾಗಿದೆ ಎಂದು ಸಭೆಯಲ್ಲಿ ಸುರೇಶ್ ಅಂಗಡಿ ಅವರಿಗೆ ತಿಳಿಸಲಾಯಿತು ಎಂದು ಅಂಗಡಿ ಸೋದರ ಮಾವ ಲಿಂಗರಾಜ್ ಪಾಟೀಲ್ ಹೇಳಿದ್ದಾರೆ.

ಆ ಸಭೆಯಲ್ಲಿ ನಾನೂ ಸಹ ಭಾಗಿಯಾಗಿದ್ದೆ. ಮುರಳೀಧರ್ ‌ರಾವ್ ಅವರಿಗೆ ಸುರೇಶ್ ಅಂಗಡಿ ನನ್ನಾ ಪರಿಚಯ ಮಾಡಿಸಿದ್ದರು. ದುರಾದೃಷ್ಟವಶಾತ್ ಸುರೇಶ್ ಅಂಗಡಿ ವಿಧಿವಶರಾದರು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸುರೇಶ್ ಅಂಗಡಿ ಕುಟುಂಬಸ್ಥರಿಗೇ ಟಿಕೆಟ್ ನೀಡುವಂತೆ ಲಿಂಗರಾಜ್ ಪಾಟೀಲ್ ಮನವಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ನಾನು ಮನವಿ ಮಾಡಿಕೊಂಡಿದ್ದೇನೆ. ಸುರೇಶ್ ಅಂಗಡಿ ಪತ್ನಿ ಮಂಗಲಾ, ಮಕ್ಕಳಾದ ಸ್ಪೂರ್ತಿ, ಶ್ರದ್ಧಾ ಇದ್ರಲ್ಲಿ ಯಾರಿಗಾದರೂ ಟಿಕೆಟ್ ‌ನೀಡಿ ಅಂತಾನೂ ಕೋರಿದ್ದೇವೆ ಎಂದು ಟಿವಿ9 ಗೆ ದಿ. ಸುರೇಶ್ ಅಂಗಡಿ ಸೋದರಮಾವ ಲಿಂಗರಾಜ್ ಪಾಟೀಲ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಮುಟ್ಟಿನ ರಜೆ ಕಡ್ಡಾಯ ಮಾಡಿದರೆ ಉದ್ಯೋಗದಾತರು ಮಹಿಳೆಯರನ್ನು ನೇಮಿಸುವುದಿಲ್ಲ: ಸುಪ್ರೀಂ

Spread the loveನವದೆಹಲಿ: ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ ನೀಡಿದರೆ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ. ನಾವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ