ಬೆಂಗಳೂರು: ಮಧ್ಯರಾತ್ರಿ ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಚಲ್ಲಾಪಿಲ್ಲಿಯಾಗಿದ್ದು, ವೃದ್ಧ ದಂಪತಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ವಿಜಯನಗರದ ಹಂಪಿನಗರದಲ್ಲಿ ನಡೆದಿದೆ.
ಎರಡು ಅಂತಸ್ತಿನ ಮೊದಲನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿದ್ದು, ವೃದ್ಧ ದಂಪತಿಗಳಾದ ಸೂರ್ಯನಾರಾಯಣ ಶೆಟ್ಟಿ ಹಾಗೂ ಪತ್ನಿ ಪುಷ್ಪಾವತಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಸುಮಾರು ಐದಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ. ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 15 ದಿನಗಳ ಹಿಂದೆ ಖರೀದಿಸಿದ್ದ ಫ್ರಿಡ್ಜ್ ಸ್ಫೋಟಗೊಂಡು ದುರ್ಘಟನೆ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಫೋಟ ಸಂಭವಿಸುತ್ತಿದ್ದಂತೆ ಇಡೀ ಏರಿಯಾದಲ್ಲಿ ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ ಎನ್ನಲಾಗಿದೆ.
Laxmi News 24×7