ಬೆಳಗಾವಿ: ಶಾಸಕ ಅಭಯ ಪಾಟೀಲ ಅವರಿಗೆ ನಿನ್ನೆಯಷ್ಟೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆದ್ರೆ, ಮೂಲಗಳು ಹೇಳುವ ಪ್ರಕಾರ ಶಾಸಕರು ಆಸ್ಪತ್ರೆಗೆ ದಾಖಲಾಗಿಲ್ಲ. ಈ ನಡುವೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಭೀತಿ ಶುರುವಾಗಿದೆ.
ಹೌದು, ಇತ್ತಿಚಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರವಾಹ ಕುರಿತಾದ ಸಭೆ ನಡೆಸಲು ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲರು ಕೂಡ ಪಾಲ್ಗೊಂಡಿದ್ದರು ಎನ್ನುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಕೂಡ ಮತ್ತೊಮ್ಮೆ ಕೊರೊನಾ ಭೀತಿ ಎದುರಾಗಿದೆ.