ಬೆಳಗಾವಿ: ಇಲ್ಲಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಅವರಿಗೆ ಶುಕ್ರವಾರ ಕೋವಿಡ್-19 ದೃಢಪಟ್ಟಿದೆ.
‘ಅವರು ಹೋಂ ಐಸೊಲೇಷನಲ್ಲಿದ್ದಾರೆ. ಕುಟುಂಬದವರ ಪರೀಕ್ಷಾ ವರದಿ ಬರುವುದು ಬಾಕಿ ಇದೆ’ ಎಂದು ಸಹೋದರ ಸಂತೋಷ ಪಾಟೀಲ ‘ಪ್ರಜಾವಾಣಿ’ಗೆ ಖಚಿತಪಡಿಸಿದರು.
ಶಾಸಕರು ಆ.25ರಂದು ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು.