Breaking News

ತೀವ್ರ ವಿವಾದ ಸೃಷ್ಠಿಸಿದ್ದ ಪೀರನವಾಡಿಯ ಸಂಗೋಳ್ಳಿ ರಾಯಣ್ಣನ ಪುತ್ಥಳಿ ಪ್ರತಿಷ್ಠಾಪನಾ ಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ.

Spread the love

ಬೆಳಗಾವಿ:ತೀವ್ರ ವಿವಾದ ಸೃಷ್ಠಿಸಿದ್ದ ಪೀರನವಾಡಿಯ ಸಂಗೋಳ್ಳಿ ರಾಯಣ್ಣನ ಪುತ್ಥಳಿ ಪ್ರತಿಷ್ಠಾಪನಾ ಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಸಚಿವರಾದ ಕೆ‌.ಎಸ್.ಈಶ್ವರಪ್ಪ ಅವರು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದ್ರು.

ನಿನ್ನೆಯಷ್ಟೇ ಪೀರನವಾಡಿಯಲ್ಲಿ ವಿವಿಧ ಸಂಘಟನೆಗಳ ವತಿಯಿಂದ ನೂತನವಾಗಿ ಸ್ಥಾಪಿಸಲಾಗಿರುವ ನೂತನ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಚಿವದ್ವಯರು
ಪೀರನವಾಡಿ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೂ ಕೂಡ ಮಾಲಾರ್ಪಣೆ ಮಾಡಿದರು. ಅಬಕಾರಿ ಸಚಿವರಾದ ಎಚ್.ನಾಗೇಶ್, ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಕೃಷ್ಣೆ ಮಡಿಲ ಕುವರನಿಗೆ ‘ರಾಜ್ಯೋತ್ಸವ’ ಗರಿ

Spread the love ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಶಿರಹಟ್ಟಿ ಮೂಲದವರಾದ, ಹಿರಿಯ ಸಾಹಿತಿ ಬಾಳಾಸಾಹೇಬ ಲೋಕಾಪುರ ಅವರಿಗೆ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ