Breaking News
Home / new delhi / ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಗೆಜೆಟ್​ ನೋಟಿಫಿಕೇಶನ್​ ಹೊರಡಿಸಲ ಕ್ರಮ: ರಮೇಶ್ ಜಾರಕಿಹೊಳಿ‌

ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಗೆಜೆಟ್​ ನೋಟಿಫಿಕೇಶನ್​ ಹೊರಡಿಸಲ ಕ್ರಮ: ರಮೇಶ್ ಜಾರಕಿಹೊಳಿ‌

Spread the love

ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸ್ಥಾಪಿಸಲಾಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು‌ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ (Ramesh jarakiholi) ಹೇಳಿದರು.

ಬೆಳಗಾವಿ ಸಮೀಪದ ಪೀರನವಾಡಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ‌ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ‌, ಸಂಗೊಳ್ಳಿ ರಾಯಣ್ಣ ಪ್ರತಿಮೆ (Sangolli Rayanna statue) ವಿವಾದ ನಿನ್ನೆಯೇ ಸುಖಾಂತ್ಯವಾಗಿರುವುದು ಒಳ್ಳೆಯ ಬೆಳವಣಿಗೆ.

ಸಂಗೊಳ್ಳಿ ರಾಯಣ್ಣ ಮತ್ತು‌ ಛತ್ರಪತಿ ಶಿವಾಜಿ ಇಬ್ಬರೂ ದೇಶದ ಮಹಾಪುರುಷರು.

ಅವರಿಬ್ಬರೂ ಯಾವುದೇ ಜಾತಿಗೆ ಸೀಮಿತವಲ್ಲ. ಇಬ್ಬರೂ ನಮ್ಮ ಸಮಾಜದ ಆಸ್ತಿಯಾಗಿದ್ದಾರೆ ಎಂದರು.
ಮುಂದೆ ರಾಷ್ಟ್ರಭಕ್ತ ಮಹಾನ್​ ನಾಯಕರ ಪ್ರತಿಮೆಗಳಿಗೆ ಯಾವುದೇ ರೀತಿಯ ಅವಮಾನವಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ರಮೇಶ್ ಜಾರಕಿಹೊಳಿ‌ ಹೇಳಿದರು.

ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ

ಕರ್ನಾಟಕ ಸರ್ಕಾರಕ್ಕೆ ಶಿವಸೇನೆ (Shivasena) ಪಕ್ಷದ ಸಚಿವರು ಪತ್ರ ಬರೆದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ರಮೇಶ್ ಜಾರಕಿಹೊಳಿ‌, ಶಿವಸೇನೆ ಬರೆದ‌ ಪತ್ರ ದುರುದ್ದೇಶದಿಂದ ಕೂಡಿದೆ. ಅವರು ಯಾವ ಅಜೆಂಡಾ ಇಟ್ಟುಕೊಂಡು ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಏರಿದ್ದಾರೆ ಎಂಬುದು ಗೊತ್ತಿದೆ. ಈ ಕುರಿತು ನಾನು ಬಹಳಷ್ಟು ಸಾರಿ ‌ಹೇಳಿದ್ದೇನೆ. ನಾವು ಅದಕ್ಕೆ ಮಹತ್ವ ಕೊಡಬಾರದು ಎಂದರು.

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ: ಸಂಯಮದಿಂದ ವರ್ತಿಸುವಂತೆ ಸಿದ್ದರಾಮಯ್ಯ ಮನವಿ

ಇವತ್ತು ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಪುತ್ಥಳಿಗೆ ಸಚಿವ ಈಶ್ವರಪ್ಪ ಮತ್ತು ನಾನು ಹೂವಿನ ಹಾರ ಹಾಕಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದೇವೆ ಮತ್ತು ನಾವು ಸದಾ ರಾಷ್ಟ್ರಭಕ್ತರನ್ನು ಗೌರವಿಸುತ್ತೇವೆ ಎಂದರು.

ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ. ಹಾಗೆಯೇ ಪ್ರಕರಣ ಹಿಂಪಡೆಯುವಂತೆ ಆಗ್ರಹ ಮಾಡುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ. ತಪ್ಪಿದ ಅನಾಹುತ

Spread the love ಮುಧೋಳ: ಸಿಲಿಂಡರ್ ಸ್ಫೋಟಗೊಂಡು ಮನೆಗೆ ಹಾನಿಯಾಗಿರುವ ಘಟನೆ ಸಮೀಪದ ಶಿರೋಳ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಸಿದ್ದಪ್ಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ