Breaking News

ಆರ್‌ಸಿಯು: ಪೂರಕ ತರಗತಿ ಸೆ.1ರಿಂದ

Spread the love

ಬೆಳಗಾವಿ: ‘ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕ ಕೋರ್ಸ್‍ಗಳ 6ನೇ ಸೆಮಿಸ್ಟರ್ ಹಾಗೂ ಸ್ನಾತಕೋತ್ತರ ಕೋರ್ಸ್‍ಗಳ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸೆ.1ರಿಂದ ಪೂರಕ ತರಗತಿ ನಡೆಸಲಾಗುತ್ತದೆ. ಆದರೆ, ಈ ತರಗತಿಗಳು ಕಡ್ಡಾಯವಾಗಿರುವುದಿಲ್ಲ’ ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ತಿಳಿಸಿದ್ದಾರೆ.

‘ವಿಶ್ವವಿದ್ಯಾಲಯ ವ್ಯಾಪ್ತಿಯ ಸ್ನಾತಕ ಹಾಗೂ ಸ್ನಾತಕೋತ್ತರ ಕಾಲೇಜುಗಳಲ್ಲಿ ಅಭ್ಯಾಸ ಮಾಡುತ್ತಿರುವವರ ಪೈಕಿ ಹೆಚ್ಚಿನವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಆಗಿದ್ದಾರೆ. ಆನ್‍ಲೈನ್ ತರಗತಿಗಳ ಅಲಭ್ಯತೆ ಹಿನ್ನೆಲೆಯಲ್ಲಿ ಪರೀಕ್ಷಾ ಸಿದ್ಧತೆಗೆ ಅವರಿಗೆ ತೊಂದರೆಯಾಗಿದೆ. ಪರೀಕ್ಷೆ ಬರೆಯುವುದಕ್ಕಾಗಿ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗಸೂಚಿ ಅನ್ವಯ ಪೂರಕ ತರಗತಿಗಳನ್ನು ನಡೆಸಲಾಗುತ್ತಿದೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ

Spread the loveಬೆಳಗಾವಿ: ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ