Breaking News

ಬೆಳಗಾವಿ: ಸಕ್ಕರೆ ಕಾರ್ಖಾನೆ ಎದುರು ರೈತರ ಧರಣಿ

Spread the love

ಎಂ.ಕೆ. ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಕಬ್ಬಿನ ಬಾಕಿ ಬಿಲ್ ಹಾಗೂ ಕಾರ್ಮಿಕರ ವೇತನ ಪಾವತಿಗೆ ಆಗ್ರಹಿಸಿ ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಎದುರು ರೈತರು ಸೋಮವಾರ ಧರಣಿ ಆರಂಭಿಸಿದ್ದಾರೆ.

‘2017-18ನೇ ಸಾಲಿನ ಕಬ್ಬಿನ ಬಾಕಿ ಬಿಲ್ ₹ 7.8 ಕೋಟಿ, 2018-19 ಮತ್ತು 2019-20ನೇ ಸಾಲಿನ ಕಬ್ಬು ಕಟಾವು ಮತ್ತು ಸಾಗಾಣಿಕೆಯ ಬಾಕಿ ₹ 1.2 ಕೋಟಿ ಹಾಗೂ 2019-20ನೇ ಸಾಲಿನಲ್ಲಿ ಜನವರಿ ನಂತರ ಕಬ್ಬು ಪೂರೈಸಿದ ರೈತರ ₹ 13.5 ಕೋಟಿಯನ್ನು ಪಾವತಿಸಬೇಕಿದೆ. ಕಾರ್ಮಿಕರ 6 ತಿಂಗಳ ವೇತನ ಬಾಕಿ ಉಳಿಸಿಕೊಂಡಿದೆ’ ಎಂದು ರೈತ ಸಂಘದ ರಾಜ್ಯ ಸಂಚಾಲಕಿ ಜಯಶ್ರೀ ಗುರನ್ನವರ ತಿಳಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ನಾಯ್ಕ, ‘ರೈತರ ಬಾಕಿ ಹಣ ಪಾವತಿಸಬೇಕೆಂದು ಹಲವು ಬಾರಿ ಕಾರ್ಖಾನೆಗೆ ಹಾಗೂ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದೇವೆ.

ಪ್ರಯೋಜನ ಆಗದಿರುವುದರಿಂದಾಗಿ ಹೋರಾಟಕ್ಕೆ ಸಿದ್ಧವಾಗಿದ್ದೇವೆ. ಬಾಕಿ ಕೊಡುವವರೆಗೂ ಧರಣಿ ನಡೆಸಲಾಗುವುದು’ ಎಂದರು.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ