Breaking News

ಬೆಳಗಾವಿ ಜಿಲ್ಲೆಯಾದ್ಯಂತ ಪೊಲೀಸರ ಭರ್ಜರಿ ದಾಳಿ ; 144 ಕೆ.ಜಿ ಗಾಂಜಾ ವಶ

Spread the love

ಬೆಳಗಾವಿ : ಇತ್ತಿಚೀನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಡ್ರಗ್ ಮಾಫಿಯಾ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ದೊಡ್ಡ ದೊಡ್ಡ ರಾಜಕಾರಣಿಗಳ ಮಕ್ಕಳು ಚಿತ್ರರಂಗದ ದೊಡ್ಡ ದೊಡ್ಡ ನಟ, ನಟಿಯರು ಡ್ರಗ್ ಮಾಫಿಯಾ ದಲ್ಲಿ ಸಿಲುಕಿಕೊಂಡಿದ್ದಾರೆ. ಒಂದೆಡೆ ಡ್ರಗ್ ಮಾಫಿಯಾ ಸದ್ದು ಮಾಡುತ್ತಿದ್ದರೆ ಇತ್ತ ಬೆಳಗಾವಿಯಲ್ಲಿ ಗಾಂಜಾ ನಶೆ ಸದ್ದು ಮಾಡುತ್ತಿದೆ. ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಅವ್ಯಾಹತವಾಗಿ ಗಾಂಜಾ ಬೆಳೆದು ರಾಜ್ಯದ ಜೊತೆಗೆ ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಮಾರಾಟ ಮಾಡಲಾಗುತ್ತದೆ. ಮೊದಲಿನಿಂದಲೂ ಗಡಿ ಗ್ರಾಮಗಳಲ್ಲಿ ಹೆಚ್ಚು ಗಾಂಜಾ ಬೆಳಯತ್ತಲೆ ಬಂದಿದ್ದಾರೆ ಮೇಲಿಂದ ಮೇಲೆ ಪ್ರಕರಣಗಳು ದಾಖಲಾಗುತ್ತಲಿವೆ. ಆದರೆ, ಯಾವಾಗ ಡ್ರಗ್‌ ಗಾಂಜಾ ಮಾಫಿಯಾ ಕುರಿತು ಮಾಧ್ಯಮಗಳಲ್ಲಿ ದೊಡ್ಡ ಮಟ್ಟದ ಸುದ್ದಿಯಾಗುತ್ತಿದ್ದಂತೆ ಈಗ ಬೆಳಗಾವಿ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.

ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಅಕ್ರಮವಾಗಿ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದವರ ಹಡೆಮುರಿ ಕಟ್ಟಲು ಮುಂದಾಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಪ್ರತ್ಯೇಕ 5 ಕಡೆಗಳಲ್ಲಿ ದಾಳಿ ನಡೆಸಿರುವ ಪೋಲಿಸರು 2,14,880 ರೂಪಾಯಿ ಮೌಲ್ಯದ 144.9 ಕೆಜಿ ಗಾಂಜಾವನ್ನ ವಶಪಡಿಸಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಕುಡಚಿ ಪೊಲೀಸರು ಸುಟ್ಟಟ್ಟಿ ಗ್ರಾಮದಲ್ಲಿ ದಾಳಿ ನಡೆಸಿ ಕಬ್ಬಿಣ ಗದ್ದೆಯಲ್ಲಿ ಅಕ್ರಮವಾಗಿ ಬೆಳೆದಿದ್ದ 120 ಕೇಜಿ ಹಸಿ ಗಾಂಜಾವನ್ನ ವಶಕ್ಕೆ ಪಡೆದು ಲಕ್ಕಪ್ಪ ಖೋತ ಹಾಗೂ ಮಗ ಲಕ್ಷ್ಮಣ ಖೋತ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಡಿಸಿಐಬಿ ಪೊಲೀಸರು ದಾಳಿ ನಡೆಸಿ ಅಥಣಿ ಹಣಮಾಪುರ ಕ್ರಾಸ್ ಬಳಿ ದಾಳಿ ನಡೆಸಿ ಒಣ ಗಾಂಜಾ ಮಾರಾಟ ಮಾಡುತ್ತಿದ್ದವರನ್ನ ಬಂದಿಸಿ ಅವರಿಂದ 39 ಸಾವಿರ ಮೌಲ್ಯದ 2 ಕೆಜಿ ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಆರೋಪಿಗಳಾದ ಸಾಗರ ಕಟ್ಟಿಕರ ಹಾಗೂ ಗುರುಲಿಂಗ ಡೋಲೆ ಎಂಬ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.

ಇನ್ನು ಚಿಕ್ಕೋಡಿ ಪೊಲೀಸರು ದಾಳಿ ನಡೆಸಿ ಬೆಳಗಲಿ ಗ್ರಾಮದ ಗದ್ದೆಯಲ್ಲಿ ಬೆಳೆದಿದ್ದ 30 ಸಾವಿರ ಮೌಲ್ಯದ 17 ಕೇಜಿ ಹಸಿ ಗಾಂಜಾವನ್ನ ಜಪ್ತಿ ಮಾಡಿದ್ದಾರೆ. ಆರೋಪಿಯಾದ ಶಿವಪ್ಪಾ ಶಿರಗಾಂವಿಯನ್ನ ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಯಮಕಣಮರಡಿ ಪೊಲೀಸರು ದಾಳಿ ನಡೆಸಿ ತನ್ನ ಸ್ವಂತ ಹೊಲದಲ್ಲೆ ಗಾಂಜಾ ಬೆಳೆದು ತಾನೆ ಮಾರಾಟ ಮಾಡುತ್ತಿದ್ದ ಇಂಗಳಿ ಗ್ರಾಮದ ಜಮಾಲಸಾಬ ಅಂಕಲಿ ಎಂಬಾತನನ್ನ ಬಂಧಿಸಿದ್ದಾರೆ. ಬಂದಿತನಿಂದ ಮಾರಾಟ ಮಾಡಲು ತಂದಿದ್ದ 9 ಸಾವಿರ ಮೌಲ್ಯದ 4.4 ಕೆಜಿ ಹಸಿ ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ.

ಅಪೌಷ್ಟಿಕತೆ ನಿವಾರಣೆಗೆ ಮನೆ ಮನೆಗೆ ತೆರಳಿ ಬಾಳೆಹಣ್ಣು ವಿತರಣೆ ; ಶಿಕ್ಷಕನ ಕಾರ್ಯಕ್ಕೆ ಮೆಚ್ಚುಗೆ

ಖಾನಾಪುರ ಪೊಲೀಸರು ದಾಳಿ ನಡೆಸಿ ಗಾಂಜಾವನ್ನ ಖರಿದಿಸಿ ಬೇರೆಡೆಗೆ ಮಾರಾಟ ಮಾಡುತ್ತಿದ್ದ ಜಾಲವನ್ನೆ ಪತ್ತೆ ಹಚ್ಚಿದ್ದಾರೆ ಒಟ್ಟು 7 ಆರೋಪಿಗಳನ್ನ ಬಂದಿಸಿರುವ ಪೊಲೀಸರು 9500 ಮೌಲ್ಯದ 953 ಗ್ರಾಮ ಒಣ ಗಾಂಜಾವನ್ನ ವಶಕ್ಕೆ ಪಡೆದು ಎಲ್ಲಾ ಆರೋಪಿಗಳನ್ನು ಬಂದಿಸಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.ಇನ್ನು ಒಟ್ಟು ದಾಳಿಯಲ್ಲಿ ಗಾಂಜಾ ಸಾಗಟ ಮಾರಾಟ ಮಾಡಲು ಉಪಯೋಗಿಸುತ್ತಿದ್ದ ಒಂದು ಕಾರು ಒಂದು ಬೈಕ್ ಹಾಗೂ 3 ಮೊಬೈಲ್ ಪೋನ್ ಗಳನ್ನ ವಶಕ್ಕೆ ಪಡೆದಿದ್ದಾರೆ.

ಒಟ್ಟಿನಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತ ಗಾಂಜಾ ನಶೆ ಸದ್ದು ಮಾಡುತ್ತಿದೆ. ಇನ್ನು ಹೆಚ್ಚಿನ ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ. ಈಗಾಗಲೇ ಎಲ್ಲಾ ಪೊಲೀಸ್ ಠಾಣೆಗಳಿಗೂ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಯಾರೆ ಗಾಂಜಾ ಬೆಳೆದು ಮಾರಾಟ ಮಾಡುವವರನ್ನ ಹುಡುಕಿ ಪ್ರಕರಣ ದಾಖಲು ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಎಸ್.ಪಿ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಜಲಜೀವನ್​​​ ಮಿಷನ್​​​ ಯೋಜನೆ ಅನುಷ್ಠಾನದಲ್ಲಿನ ತಪ್ಪುಗಳ ಬಗ್ಗೆ ತನಿಖೆ ?

Spread the loveಬೆಂಗಳೂರು: ತುಮಕೂರು ಜಿಲ್ಲೆಯ ಜಲಜೀವನ್​​ ಮಿಷನ್​​ ಯೋಜನೆ ಅನುಷ್ಠಾನದಲ್ಲಿ ನಾನಾ ತಪ್ಪುಗಳಾಗಿದ್ದು, ಸರ್ಕಾರ ತನಿಖೆ ನಡೆಸಿ ವರದಿ ನೀಡಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ