Breaking News

ಎಬಿವಿಪಿಯಿಂದ ಸಹಿ ಸಂಗ್ರಹ ಅಭಿಯಾನ ಆರಂಭ

Spread the love

ಬೆಳಗಾವಿ: ‘ಡ್ರಗ್ಸ್ ಜಾಲದಲ್ಲಿ ತೊಡಗಿರುವವರನ್ನು ತಕ್ಷಣ ಬಂಧಿಸಿ, ದೇಶದ್ರೋಹದ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮಹಾನಗರ ಘಟಕದ ಕಾರ್ಯಕರ್ತರು ಬುಧವಾರ ಸಹಿ ಸಂಗ್ರಹ ಅಭಿಯಾನ ಆರಂಭಿಸಿದರು.

ಇಲ್ಲಿನ ಹುತಾತ್ಮ ಚೌಕದಲ್ಲಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಚಾಲನೆ ನೀಡಿದರು.

ಎಬಿವಿಪಿ ರಾಜ್ಯ ಸಹ ಸಂಘಟನಾ ಕಾರ್ಯದರ್ಶಿ ಪೃಥ್ವಿಕುಮಾರ್ ಮಾತನಾಡಿ, ‘ಶಾಲಾ-ಕಾಲೇಜು ಅಂಗಳಕ್ಕೂ ಡ್ರಗ್ಸ್ ಜಾಲ ಕಾಲಿಟ್ಟಿದೆ. ಗುಣಾತ್ಮಕ ಶಿಕ್ಷಣ ಪಡೆದು ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ಯುವಪೀಳಿಗೆ ದುಶ್ಚಟಕ್ಕೆ ಬಲಿಯಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ರಾಜ್ಯ ಘಟಕದ ಉಪಾಧ್ಯಕ್ಷ ಆನಂದ ಹೊಸೂರ, ರೋಹಿತ ಉಮನಾಬಾದಿಮಠ, ಕಿರಣ ಇದ್ದರು.


Spread the love

About Laxminews 24x7

Check Also

 ಜಿಲ್ಲೆಯಲ್ಲಿ ಶೇ.75ರಷ್ಟು ಮತದಾರರ ಪಟ್ಟಿ ಮ್ಯಾಪಿಂಗ್ ಪೂರ್ಣ

Spread the loveಮತದಾರರ ಪಟ್ಟಿಯ ವಿಶೇಷ   ಪರಿಷ್ಮರಣೆಯ ಪೂರ್ವಸಿದ್ಧತೆ ಭಾಗವಾಗಿ 2022ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ